ಬೆಂಗಳೂರು:ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಜತೆಗೆ ಅವರನ್ನು ಬಂಧಿಸಿ ಕಾನೂನುಕ್ರಮ ಜರುಗಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ.
ವೀರಶೈವ ಲಿಂಗಾಯತ ಭವನದಲ್ಲಿ ಇಂದು ಮಹಾಸಭಾದ ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಈ ಕುರಿತು ನಿರ್ಧಾರ ತಳೆಯಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ ಖಂಡ್ರೆ ಅವರ ಬಣ್ಣದ ಕುರಿತು ಮತ್ತು ಪ್ರಾದೇಶಿಕತೆ ಬಗ್ಗೆ ಆ. 1ರಂದು ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ರ‌್ಯಾಲಿಯಲ್ಲಿ ಆರಗ ಜ್ಞಾನೇಂದ್ರ ಅವಹೇಳನಕಾರಿ ಆಗಿ ಮಾತನಾಡಿದ್ದರು.
ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಾಗೂ ದೂರು ದಾಖಲಾದ್ದರಿಂದ ಅವರು ಕ್ಷಮೆ ಯಾಚಿಸಿದ್ದರು. ಆದರೆ ಕ್ಷಮೆ ಯಾಚಿಸುವಾಗ ನಾನು ಈಶ್ವರ ಖಂಡ್ರೆ ಅವರ ಹೆಸರು ಹೇಳುವಾಗ ಬಾಯಿತಪ್ಪಿ ಖರ್ಗೆ ಅವರ ಹೆಸರು ಉಚ್ಚರಿಸಿದ್ದೆ ಎಂದು ಉದ್ಧಟತನದ ಹೇಳಿಕೆ ನೀಡಿದ್ದರು. ಹೀಗಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಆರಗ ವಿರುದ್ಧ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ, ಬಂಧಿಸುವುದಷ್ಟೇ ಅಲ್ಲದೆ, ಬಿಜೆಪಿಯವರು ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು. ತಪ್ಪಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳುವುದಾಗಿ ಮಹಾಸಭಾ ಹೇಳಿದೆ.
ಮದುವೆಯಾಗುವ ಕನಸು ಚಿಗುರಿಸಿದ ಟೊಮ್ಯಾಟೋ; ಹುಡುಗಿ ಹುಡುಕಲು ಮುಂದಾದ ಕೃಷಿಕ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fourteen =
Remember me
