ವಿಜಯಪುರ: ಹಾಲಿ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅವರು ನಾಲ್ಕು ವರ್ಷಗಳ ಸೇವೆಯ ನಂತರ ನಿವೃತ್ತಿಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಓಂಕಾರ ಕಾಕಡೆ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿ ವಜುಬಾಯಿ ವಾಲಾ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ಈ ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ 20-6-2020ರಿಂದ 13-12-2020ರ ವರೆಗೆ ಅಥವಾ ನೂತನ ಕುಲಪತಿಗಳ ನೇಮಕ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಸಿದ್ಧಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕರೊನಾ: ಇತರ 400 ವಿದ್ಯಾರ್ಥಿಗಳಿಗೆ ಆತಂಕ!
ರಾಜ್ಯಪಾಲರ ಆದೇಶದಂತೆ ಪ್ರೊ. ಸಬಿಹಾ ಭೂಮಿಗೌಡ ಅವರು ನೂತನ ಕುಲಪತಿ ಪ್ರೊ. ಓಂಕಾರ ಕಾಕಡೆ ಅವರಿಗೆ ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ. ಸಬಿಹಾ ಅವರನ್ನು ವಿಶ್ವವಿದ್ಯಾನಿಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಮಾಸ್ಕ್ ಧರಿಸದೇ ಬಂದ ಪ್ರತಾಪ್‌ಸಿಂಹಗೆ ವಿಧಾನಸೌಧದ ಬಾಗಿಲಲ್ಲೇ ತಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 15 =
Remember me
