ಬೆಂಗಳೂರು:ಖ್ಯಾತ ನಿರೂಪಕ ಅಕುಲ್ ಬಾಲಾಜಿ ಒಡೆತನದ ರೆಸಾರ್ಟ್​ನಲ್ಲಿ ಪೇಜ್ 3 ಪಾರ್ಟಿ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಪಟ್ಟಿರುವ ಡ್ರಗ್ಸ್​ ಪೆಡ್ಲರ್​ಗಳು ಅಕುಲ್​ರ ರೆಸಾರ್ಟ್​ನಲ್ಲಿ ಪಾರ್ಟಿ ಮಾಡುತ್ತಿದ್ದಾಗಿ ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ವಿಚಾರಣೆ ಎದುರಿಸಲು ಸಿಸಿಬಿ ಕಚೇರಿಗೆ ಅಕುಲ್ ತೆರಳಿದ್ದಾರೆ.
ದೊಡ್ಡಬಳ್ಳಾಪುರ ಬಳಿಯ ಲಘುಮೇನಹಳ್ಳಿ ಬಳಿ ಅಕುಲ್​ಗೆ ಸೇರಿದ ‘ಸನ್ ಶೈನ್ ಬೈ ಜೆಡ್’ ರೆಸಾರ್ಟ್ ಇದೆ. ಲಾಕ್​ಡೌನ್ ಸಮಯದಲ್ಲಿ ಅಂದರೆ ಏ.20ರಂದು ಅಕುಲ್ ಬಾಲಾಜಿ ಈ ರೆಸಾರ್ಟ್​ನಲ್ಲಿ ಪಾರ್ಟಿ ಮಾಡಿದ್ದರು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣೆಗೆ ಸ್ಥಳೀಯ ನಿವಾಸಿ ಮಂಜುನಾಥ್ ದೂರು ನೀಡಿದ್ದರು. ಪ್ರಕರಣ ಸಂಬಂಧ ಎಫ್ಐಆರ್ ಕೂಡ ದಾಖಲಾಗಿತ್ತು.
ಇನ್ನು ಅಕುಲ್​ರ ರೆಸಾರ್ಟ್​ಗೆ ಹಲವು ಬಾರಿ ನಟಿ ರಾಗಿಣಿ ದ್ವಿವೇದಿ ಮತ್ತು ರವಿಶಂಕರ್ ಹೋಗಿದ್ದರು ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಡ್ರಗ್ಸ್​ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಅಂದಹಾಗೆ ಅಕುಲ್​ರ ಆ ರೆಸಾರ್ಟ್​ ಹೇಗಿದೆ ಗೊತ್ತಾ? ಇಲ್ಲಿವೆ ಆ ಫೋಟೋಗಳು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + 13 =
Remember me
