ಬೆಂಗಳೂರು:ಕರ್ನಾಟಕದಾದ್ಯಂತ ಮೇ 10ರಿಂದ 24ರವರೆಗೆ ಲಾಕ್ಡೌನ್ ಮಾಡಬೇಕೆಂಬ ಆದೇಶಕ್ಕೆ ತಾವು ಸಿದ್ಧವಿರುವುದಾಗಿ ಟೆಲಿವಿಷನ್ ಅಸೋಸಿಯೇಷನ್ ತಿಳಿಸಿದೆ.
ಮೇ 10ರಿಂದ 14 ದಿನಗಳ ಕಾಲ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಧಾರಾವಾಹಿ, ಸಿನಿಮಾ ಮತ್ತು ರಿಯಾಲಿಟಿ ಷೋಗಳ ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಸರ್ಕಾರ ಆದೇಶಿಸಿದೆ. ಈ ಆದೇಶಕ್ಕೆ ನಮ್ಮ ಬೆಂಬಲವಿದೆ. ನಾವು ಚಿತ್ರೀಕರಣ ಮಾಡುವುದಿಲ್ಲ. ಕರೊನಾದಿಂದಾಗಿ ನಮ್ಮ ಉದ್ಯಮದ ಹಲವರನ್ನು ನಾವು ಕಳೆದುಕೊಂಡಿದ್ದೇವೆ. ಕಲಾವಿದರ ನಿಧನ ನಮಗೂ ನೋವು ತಂದಿದೆ. ಹಾಗಾಗಿ ಯಾವುದೇ ಶೂಟಿಂಗ್ಗೆ ಅನುಮತಿ ನೀಡುವುದಿಲ್ಲ ಎಂದು ಅಸೋಸಿಯೇಷನ್ ತಿಳಿಸಿದೆ.
ಒಂದು ವೇಳೆ ಯಾರಾದರೂ ಕದ್ದು ಮುಚ್ಚಿ ಶೂಟಿಂಗ್ ಮಾಡಿರುವುದು ತಿಳಿದುಬಂದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ದಿಗ್ವಿಜಯ ನ್ಯೂಸ್ಗೆ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಎಸ್ ವಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − three =
Remember me
