ಬೆಂಗಳೂರು:ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂ. ಪಡೆದು, ವಂಚನೆ ಮಾಡಿರುವ ಆರೋಪದ ಮೇರೆಗೆ ಬಂಧಿತರಾಗಿರುವ ಚೈತ್ರಾ ಕುಂದಾಪುರಳನ್ನು ಇಂದು ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರಲಾಗಿದ್ದು, ಈ ವೇಳೆ ಆಕೆ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾಳೆ.
ಸಿಸಿಬಿ ಕಚೇರಿ ಮುಂದೆ ಪೊಲೀಸ್​ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳ ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳುತ್ತಲೇ ಚೈತ್ರಾ ಸಿಸಿಬಿ ಕಚೇರಿ ಒಳಗಡೆ ಹೋದರು.
ಚೈತ್ರಾಳ ಈ ಹೇಳಿಕೆ ಇದೀಗ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಹಾಗದರೆ ಈ ಪ್ರಕರಣದಲ್ಲಿ ದೊಡ್ಡವರು ಸಹ ಶಾಮೀಲು ಆಗಿದ್ದಾರೆ. ಸ್ವಾಮೀಜಿ ಬಂಧನದ ಬಳಿಕ ಎಲ್ಲವೂ ಗೊತ್ತಾಗಲಿದೆಯಾ? ಎಂಬ ಪ್ರಶ್ನೆ ಮೂಡಿದೆ. ಅಂದಹಾಗೆ ಚೈತ್ರಾ ಕುಂದಾಪುರ ಅವರೊಂದಿಗೆ ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲು ಸ್ವಾಮಿ ಮಠದ ಅಭಿನವ ಶ್ರೀ ಹಾಲುಶ್ರೀ ಸ್ವಾಮೀನಿ ಕೂಡ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ಅನ್ನಭಾಗ್ಯ ಗ್ಯಾರಂಟಿ ಫಲಾನುಭವಿಗಳಿಗೆ ಸರ್ವರ್ ಅಡ್ಡಿ!; ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸ್ವೀಕಾರ ಕೇಂದ್ರದಲ್ಲಿ ಮಾರುದ್ದ ಸಾಲು
ರಾತ್ರಿಯಿಡೀ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಕಾಲ ಕಳೆದ ಚೈತ್ರಾ, ಮೊದಲ ದಿನದ ಸಿಸಿಬಿ ವಿಚಾರಣೆ ವೇಳೆ ನಾನು ತಪ್ಪು ಮಾಡಿಲ್ಲ, ನನ್ನದು ತಪ್ಪಿಲ್ಲ ಎಂದು ಹೇಳಿದ್ದಾಳೆ. ಇಂದು ಮತ್ತೆ ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ ಬಂಧಿತರ ಎಲ್ಲ ಮೊಬೈಲ್ ಫೋನ್​​ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಯಾರೆಲ್ಲ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಕೊಳ್ಳಲು ಮೊಬೈಲ್​ಗಳ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಎಲ್ಲ ಚಾಟಿಂಗ್ ಮಾಹಿತಿ ಡಿಲೀಟ್ ಆಗಿರುವುದು ಪತ್ತೆಯಾಗಿದೆ. ಹೀಗಾಗಿ ಕೋರ್ಟ್ ಅನುಮತಿ ಪಡೆದು ಮೊಬೈಲ್ ರಿಟ್ರೀವ್ ಮಾಡಿಸಲು ಸಿಸಿಬಿ ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಇಂದು ಎಲ್ಲ ಆರೋಪಿಗಳನ್ನು ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮಾಡಲಾಗುತ್ತದೆ. ಎಸಿಪಿ ರೀನಾ ಸುವರ್ಣ ನೇತೃತ್ವದಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ.
ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪ; ಚೈತ್ರಾ ಕುಂದಾಪುರ ಸೇರಿ ನಾಲ್ವರು ಪೊಲೀಸರ ವಶ

ಸಿಸಿಬಿ ಪೊಲೀಸರು, ನ್ಯಾಯಾಧೀಶರ ಮುಂದೆಯೂ ಕಣ್ಣೀರಿಟ್ಟ ಚೈತ್ರಾ ಕುಂದಾಪುರ ಹೇಳಿದ್ದೇನು?

ಮುಂಬೈನಲ್ಲಿ ಕ್ಯಾಟರಿಂಗ್ ಉದ್ಯಮಿಗೆ ಚೈತಾ ಕುಂದಾಪುರ ಗ್ಯಾಂಗ್‌ ವಂಚಿಸಿದ ರೋಚಕ ಕತೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 16 =
Remember me
