ಹಾಸನ: ಎಂಎಲ್​ಸಿ ಡಾ.ಸೂರಜ್ ರೇವಣ್ಣ ವಿರುದ್ದ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಅವರ ಎಫ್​ಐಆರ್ ದಾಖಲಾಗಿದೆ.
ಇದನ್ನೂ ಓದಿ:ಜೋಧ್‌ಪುರದಲ್ಲಿ ಕೋಮುಗಲಭೆ: 51 ಮಂದಿ ಬಂಧನ, ಇಬ್ಬರು ಪೊಲೀಸರಿಗೆ ಗಾಯ
ಶುಕ್ರವಾರ (ಜೂ.21) ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದ ಸಂತ್ರಸ್ಥ, ದೂರು ನೀಡುವಾಗಲೇ ಹಾಸನ ಜಿಲ್ಲಾಧಿಕಾರಿಗೆ ದೂರಿನ ಪ್ರತಿ ಇ-ಮೇಲ್ ಮಾಡಿದ್ದರು. ಇದರ ಜೊತೆಗೆ ಮೇಲ್ ಮಾಡಿದ್ದ ಬಗ್ಗೆಯೂ ವಿಡಿಯೋ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಅದರಂತೆ ಇಂದು ಹಾಸನದ ಜಿಲ್ಲಾ ಪೊಲೀಸ್ ಕಛೇರಿಗೆ ಸಂತ್ರಸ್ಥನ ದೂರು ತಲುಪಿದ್ದು, ಜಿಲ್ಲಾ ಪೊಲೀಸ್ ಕಛೇರಿಗೆ ಬಂದ ದೂರನ್ನು, ಅಧಿಕಾರಿಗಳನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಿದ್ದಾರೆ. ದೂರಿನ ಸತ್ಯಾಸತ್ಯತೆಗಾಗಿ ದೂರುದಾರನನ್ನು ಸಂಪರ್ಕ ಮಾಡಲು ಪೊಲೀಸರು ಪ್ರಯತ್ನಿಸುತ್ತಿದ್ದು, ಈ ಹಿನ್ನಲೆ ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ದೂರು ನೀಡಲು ಅರಕಲಗೂಡು ತಾಲ್ಲೂಕು ಮೂಲದ ಸಂತ್ರಸ್ಥ ಆಗಮಿಸಿದ್ದಾರೆ. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಠಾಣೆ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ನೀಡಿದ ದೂರು ನೀಡಿದ್ದು ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಪ್ರಕರಣ ದಾಖಲಾಗಿದೆ.
ತಮಿಳುನಾಡಿನಲ್ಲಿ ವಿಷಯುಕ್ತ ಮದ್ಯ ಸೇವನೆ: ಕೊನೆಗೂ ಪ್ರಮುಖ ಆರೋಪಿ ಅರೆಸ್ಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 8 =
Remember me
