ಹಾಸನ:ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ: ಉತ್ತರ ಪ್ರದೇಶವನ್ನು ಲಘುವಾಗಿ ಪರಿಗಣಿಸಿದ್ದೇ ತಪ್ಪಾಯಿತು
ಶನಿವಾರ ಸಂಜೆ ಹೊಳೆನರಸೀಪುರ ಪೊಲೀಸರು ಗನ್ನಿಕಡದ ತೋಟದ ಮನೆಯಿಂದ ಸೂರಜ್ ರೇವಣ್ಣ ಅವರನ್ನು ನಗರದ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ವಶಕ್ಕೆ ಪಡೆದಿದ್ದಾರೆ.
ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಅಂತ ಆರೋಪಿಸಿ ಯುವಕನೋರ್ವ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಏನಿದು ಪ್ರಕರಣ?ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ದ ಸಲಿಂಗ ಕಾಮ, ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದಿದ್ದವು. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕರು ಮತ್ತು ಗೃಹ ಸಚಿವರಿಗೆ ದೂರು ಸಲ್ಲಿಕೆಯಾಗಿತ್ತು.
ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಹೊಳೆನರಸೀಪುರ ನಗರ ಠಾಣೆಗೆ ಪ್ರತಿ ದೂರು ನೀಡಿದ್ದರು. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿತ್ತು.
ಇವೆಲ್ಲದರ ನಡುವೆ, ಸೂರಜ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಸಂತ್ರಸ್ತ ಪೊಲೀಸ್ ಡಿಜಿ-ಐಜಿಪಿಗೆ ನೀಡಿದ್ದ ದೂರು ಹಾಸನ ಎಸ್‌ಪಿಗೆ ಇ-ಮೇಲ್ ಮುಖಾಂತರ ರವಾನೆಯಾಗಿತ್ತು.
ನಂತರ ಶನಿವಾರ ಸಂತ್ರಸ್ತ ನೀಡಿದ ದೂರಿನ ಪ್ರತಿಯನ್ನು ಹಾಸನ ಎಸ್‌ಪಿ ಹೊಳೆನರಸೀಪುರ ಠಾಣೆಗೆ ಕಳುಹಿಸಿದ್ದರು. ಇ-ಮೇಲ್ ದೂರಿನ ಅನ್ವಯ ಸಂತ್ರಸ್ತನಿಗೆ ನೊಟೀಸ್ ನೀಡಿ ಖುದ್ದು ಠಾಣೆಗೆ ಬಂದು ದೂರು ನೀಡುವಂತೆ ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಸೂಚಿಸಿದ್ದರು.ನಂತರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮದ ಆರೋಪ ಮಾಡಿದ್ದ ಸಂತ್ರಸ್ತ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಸೂರಜ್‌ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಬಂಧಿಸುವ ಸಾಧ್ಯತೆ ಇದೆ.
ಜಪಾನ್‌, ದಕ್ಷಿಣ ಕೊರಿಯಾಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿನ ಉನ್ನತ ಮಟ್ಟದ ನಿಯೋಗ ಪ್ರವಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
