ಬೆಂಗಳೂರು:ನನ್ನ ಸುತ್ತಮುತ್ತಲಿನ 40 ಜನರ ಫೋನ್‌ಗಳನ್ನು ರಾಜ್ಯ ಸರ್ಕಾರ ಟ್ಯಾಪ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರ್ಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ದೂರಿದರು.
ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರ್ಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್‌ಗಳನ್ನು ಸರ್ಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಹೇಳಿದರು.
ಫೋನ್ ಟ್ಯಾಪ್ ಮಾಡುವಂಥ ಮುಟ್ಟಾಳ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಾಗ, ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗಿದೆ ಡಿಕೆಶಿ ಹೇಳೋದು ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
