ಮೈಸೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಮತ್ತು ಎಇಇ ವರ್ಗಾವಣೆ ಮಾಡಿ ಕೂಡಲೇ ಜಾರಿಗೆ ಬರುವಂತೆ ಸೋಮವಾರ ಸಚಿವ ಭೈರತಿ ಸುರೇಶ್ ಮೌಖಿಕ ಆದೇಶ ಹೊರಡಿಸಿದ್ದಾರೆ. ಜೊತೆಗೆ ಹಂಚಿಕೆ ಆಗಿರುವ ಎಲ್ಲಾ ಸೈಟ್​ಗಳನ್ನು ತಡೆಹಿಡಿಯಲಾಗಿದೆ.
ಇದನ್ನೂ ಓದಿ:ರಾಹುಲ್ ಹಿಂದೂಗಳನ್ನು ಅವಮಾನಿಸಿಲ್ಲ: ಸಹೋದರನ ಬೆನ್ನಿಗೆ ನಿಂತ ಪ್ರಿಯಾಂಕಾ!
50:50 ಅನುಪಾತದಲ್ಲಿ ಸೈಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರ ತಲೆದಂಡವಾಗಿದೆ. ಹಾಗೂ ಐಎಎಸ್​ ಅಧಿಕಾರಿಗಳಾದ ವೆಂಕಟಚಲಪತಿ, ಕವಳಗಿ ನೇತೃತ್ವದಲ್ಲಿ ತನಿಖೆ ನಡೆಸಿ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.  ಮುಡಾದಲ್ಲಿ ಹಗರಣ ನಡೆದಿದೆ ಎಂಬ ಬಿಜೆಪಿ ನಾಯಕರ ಆರೋಪ ಕೇಳಿಬಂದ ಬೆನ್ನಲ್ಲೇ ಸೋಮವಾರ ಸಚಿವ ಬೈರತಿ ಸುರೇಶ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಆಯುಕ್ತರ ವರ್ಗಾವಣೆಗೊಳಿಸಿ ಮೌಖಿಕ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ. ಮುಡಾ ಆಯುಕ್ತ, ಕಾರ್ಯದರ್ಶಿ, ಎಇಇ ಕೂಡ ವರ್ಗಾವಣೆಣೆ ಮಾಡಲಾಗಿದೆ. ಇದು ಕ್ರಮ ಅಲ್ಲ, ನಿಷ್ಪಕ್ಷಪಾತ ತನಿಖೆ ಹಿನ್ನೆಲೆ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಮುಡಾ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. 7 ತಿಂಗಳ ಹಿಂದೆ ನಾನೇ ಆದೇಶ ಮಾಡಿದ್ದೇನೆ. ತುಂಡು ಭೂಮಿ ಹಂಚಿಕೆ ಮಾಡದಂತೆ ಆದೇಶ ಮಾಡಿದ್ದೇನೆ. ಜೊತೆಗೆ ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಆದೇಶಗಳನ್ನ ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.
ಪುತ್ರ ಪ್ರಜ್ವಲ್​ರನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದ ಭವಾನಿ ರೇವಣ್ಣ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + 2 =
Remember me
