ವಿಜಯಪುರ:ಮತದಾನದ ದಿನ ಹತ್ತಿರ ಆಗುತ್ತಿದ್ದಂತೆ ವಿಜಯಪುರದಲ್ಲಿ ಆಣೆ ಪ್ರಮಾಣ ಜೋರಾಗಿ ನಡೆದಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತದಾರರ ಕೈಲ್ಲಿ ಆಣೆ ಪ್ರಮಾಣ ಮಾಡಿಸಿ ಒತ್ತಡ ಹೇರುವ ಕೆಲಸವನ್ನು ಮಾಡಿದೆ ಎಂದು ಆರೋಪಿಸಲಾಗಿದೆ.
ಕಾಂಗ್ರೆಸ್​ಗೆ ಮತ ಹಾಕಲು ಮತದಾರರಿಂದ ದೇವಸ್ಥಾನ ದಲ್ಲಿ ಆಣೆ ಪ್ರಮಾಣ ಮಾಡಿಸಲಾಗಿದೆ ಎನ್ನಲಾಗುತ್ತಿದೆ. ಇಂಡಿ ಮತಕ್ಷೇತ್ರದ ಕಪನಿಂಬರಗಿ ಮತದಾರರಿಗೆ ಕೂಡಗಿ ಗ್ರಾಮದ ರೇವಣಸಿದ್ದೇಶ್ಬರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ಸೋಲಿನ ಭೀತಿಯಿಂದ ಪತರಗುಟ್ಟಿದೆ ಕಾಂಗ್ರೆಸ್ಸು!
ದೇವಸ್ಥಾನದಲ್ಲಿ ಕಾಂಗ್ರೆಸ್​ಗೆ ಮತ ನೀಡೋದಾಗಿ ಆಣೆ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ರೀತಿಯಾಗಿ ಆಣೆ ಪ್ರಮಾಣದ ಮೂಲಕ ಮತದಾರರ ಮೇಲೆ ಮಾನಸಿಕ ಒತ್ತಡ ಹೇರುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಮತ್ತು ಬೆಂಬಲಿಗರ ಮೇಲೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಭಯದಿಂದ ಆಣೆ ಪ್ರಮಾಣ ಮಾಡಿಸಿ ಮತದಾರರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 12 =
Remember me
