ಬೆಂಗಳೂರು:ತಮ್ಮ ಪ್ರಭಾವವನ್ನು ಬಳಸಿ ಸಿದ್ದಾರ್ಥ್​ ಟ್ರಸ್ಟ್​ಗೆ ಸಿಎ ಸೈಟ್​ ಮಂಜೂರು ಮಾಡಿಸಿದ್ದಾರೆ ಎಂದು ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​, ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಹೆಚ್ಚಿನ ವಿವರಣೆ ಕೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕುಟುಂಬ ಸಿದ್ದಾರ್ಥ್​ ಟ್ರಸ್ಟ್​ಗೆ ಟ್ರಸ್ಟಿಗಳಾಗಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಪ್ರಭಾವವನ್ನು ಬಳಸಿ, ನಿಯಮಗಳನ್ನು ಗಾಳಿಗೆ ತೂರಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​ಗೆ ಐದು ಎಕರೆ ಸಿಎ ಸೈಟು ಅನ್ನು ಹಂಚಿಕೆ ಮಾಡಿಸಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು.
ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರವನ್ನು ಬರೆದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಣೆಯನ್ನು ನೀಡುವಂತೆ ಕೋರಿದ್ದಾರೆ.
ಇತ್ತ ರಾಜ್ಯಪಾಲರ ಆಕ್ರೋಶ ಹೊರಹಾಕಿರುವ ಪ್ರಿಯಾಂಕ್​ ಖರ್ಗೆ, ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಅವರು ಬಿಜೆಪಿಯನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಅಲ್ಲದೆ, ನನ್ನ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಮಾತ್ರ ಧ್ವನಿ ಎತ್ತಿದ್ದಾರೆ, ಇನ್ನುಳಿದ ಬಿಜೆಪಿ ನಾಯಕರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ 300 ಕಿ.ಮೀ ಹೊಸ ರಸ್ತೆ: ಡಿಸಿಎಂ

ಇನ್ನೆರೆಡು ತಿಂಗಳೊಳಗೆ ಕೆಎಎಸ್ ಪ್ರಿಲಿಮ್ಸ್ ಮರು ಪರೀಕ್ಷೆ ನಡೆಸಲು ಸಿಎಂ ಸೂಚನೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:13 − 1 =
Remember me
