ಬೆಂಗಳೂರು5,8 ಮತ್ತು 9ನೇ ತರಗತಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಆಗಿರುವ ಲೋಪಗಳ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವರದಿ ಕೇಳಿದೆ.
ಮೌಲ್ಯಾಂಕನದ ಮೌಲ್ಯಮಾಪನ ಕಾರ್ಯ ನಿರ್ವಹಿಸುವ ಸಂಪೂರ್ಣ ಜವಾಬ್ದಾರಿಯು ಜಿಲ್ಲಾ ಉಪನಿರ್ದೇಶಕರದಾಗಿತ್ತು. ನಿಗದಿತ ದಿನಾಂಕದೊಳಗೆ ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ಮರು ರವಾನಿಸಲು ಸೂಚಿಸಲಾಗಿತ್ತು.
ಪ್ರಸ್ತುತ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನಗೊಂಡ ಉತ್ತರ ಪತ್ರಿಕೆಗಳನ್ನು ಆಯಾ ಶಾಲೆಗಳಿಗೆ ಮರು ರವಾನಿಸಲಾಗಿದೆ. ಇದರಲ್ಲಿ ಸರಿ ಉತ್ತರ ಬರೆದಿದ್ದರೂ ಸೂಕ್ತ ಅಂಕ ನೀಡದಿರುವುದು, ಉತ್ತಮವಾಗಿ ಓದುವ ಮಕ್ಕಳಿಗೆ ಕಡಿಮೆ ಅಂಕ ನೀಡಿರುವುದು, ಲಿತಾಂಶದ ಅಂಕಿ-ಅಂಶಗಳ ಲೆಕ್ಕವನ್ನೇ ತಪ್ಪಾಗಿ ಮಾಡಿರುವುದು, ಕೆಲ ವಿಷಯಗಳಲ್ಲಿ ಗರಿಷ್ಠ ಅಂಕಗಳಿಗಿಂತ ಹೆಚ್ಚು ಅಂಕಗ ನೀಡಿರುವ ಪ್ರಕರಣಗಳು ಕಂಡುಬಂದಿವೆ. ಎಂಬುದಾಗಿ ಶಾಲಾ ಆಡಳಿತ ಮಂಡಳಿಗಳು ಮಾಹಿತಿ ನೀಡಿವೆ ಎಂದು ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್ ಆರೋಪಿಸಿರುವುದಾಗಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
ಈ ಹಿನ್ನೆಲೆಯಲ್ಲಿ 2023-24ನೇ ಸಾಲಿನ 5,8 ಮತ್ತು 9ನೇ ತರಗತಿಯ ಮೌಲ್ಯಮಾಪನದಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಕೂಲಂಕಶವಾಗಿ ಅಗತ್ಯವಿದ್ದಲ್ಲಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮಾಡಿಸಲು ಹಾಗೂ ಸರಿಯಾಗಿ ಮೌಲ್ಯಮಾಪನ ಮಾಡದ ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಏ.15ರೊಳಗೆ ವರದಿ ನೀಡುವಂತೆ ಮಂಡಳಿ ಅಧ್ಯಕ್ಷರು ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − five =
Remember me
