ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಎನ್‌ಡಿಎ ಜತೆ ಹೆಜ್ಜೆ ಹಾಕಿದ ಜೆಡಿಎಸ್ ನಡೆ ಕಾಂಗ್ರೆಸ್ ಮೇಲೂ ಪರೋಕ್ಷ ಪರಿಣಾಮ ಬೀರಲಾರಂಭವಾಗಿದೆ.ಬಿಜೆಪಿ ಜತೆ ಸಾಗಲು ಇಷ್ಟವಿಲ್ಲದ ಕಾಂಗ್ರೆಸ್ ನಾಯಕರು ಕದ ತಟ್ಟಲು ಆರಂಭಿಸಿದ್ದು, ಇದನ್ನು ಕೈ ನಾಯಕರು ಸ್ವಾಗತಿಸಿದರೂ ಕೆಳ ಹಂತದಲ್ಲಿ ಮುಖಂಡರು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಪ್ರಮುಖವಾಗಿ ಜಿಲ್ಲಾ ಹಂತದಲ್ಲಿ ಸಮಸ್ಯೆ ಆರಂಭವಾಗಿದೆ. ಹೊರಗಿನಿಂದ ಬಂದವರು ಸಹಜವಾಗಿ ಸರ್ಕಾರ ಹಾಗೂ ಪಕ್ಷದಲ್ಲಿ ಅವಕಾಶಕ್ಕಾಗಿ ಪೈಪೋಟಿಗಿಳಿಯುತ್ತಾರೆ, ಇದರಿಂದ ಅನಗತ್ಯ ಸ್ಪರ್ಧೆ ನಡೆಸಬೇಕಾಗುತ್ತದೆಂಬ ಕಳವಳ ಕೆಳಹಂತದ ಮುಖಂಡರದ್ದಾಗಿದೆ.ವಿರೋಧ ಪಕ್ಷಗಳ ಮೈತ್ರಿಯಿಂದ ಅಸಮಾಧಾನಿತರು ಕಾಂಗ್ರೆಸ್ ಸೇರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಲ್ಲಿ ಮಾಧ್ಯಮಗಳು ಪ್ರತಿಕ್ರಿಯೆ ಬಯಸಿದಾಗ, ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರವಾಗಿ ಎರಡೂ ಪಕ್ಷಗಳ ಅಸಮಾಧಾನಿತರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ, ಮುಖ್ಯಮಂತ್ರಿಗಳು ಹಾಗೂ ಸಂಪುಟ ಸಹೋದ್ಯೋಗಿಗಳ ಜತೆ ಈ ವಿಚಾರ ಚರ್ಚೆ ನಡೆಸಲಾಗುತ್ತದೆ ಎಂದರು.ಕೆಲವು ಕ್ಷೇತ್ರಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್‌ನಿಂದ ಆಯ್ಕೆಯಾದವರು ಕಾಂಗ್ರೆಸ್‌ಗೆ ಬರಲು ಆಸಕ್ತಿ ತೋರಿದ್ದಾರೆ, ಈ ಬಗ್ಗೆ ಪ್ರತಿಕ್ರಿಯೆ ಬಯಸಿದಾಗ ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದೇವೆ. ಇದೇ ವೇಳೆ ಪಕ್ಷಾಂತರ ಕಾಯ್ದೆ ಬಗ್ಗೆಯೂ ನಮಗೆ ಎಚ್ಚರಿಕೆ ಇದೆ ಎಂದು ಡಿಕೆಶಿ ಸ್ಪಷ್ಟಪಡಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × one =
Remember me
