ಬೆಂಗಳೂರು:ಬಿಜೆಪಿ- ಜೆಡಿಎಸ್ ಪಕ್ಷಗಳು ಒಗ್ಗಟ್ಟು ಮತ್ತು ಪರಸ್ಪರ ವಿಶ್ವಾಸದಿಂದ ಒಂದಾಗಿ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಎದುರಿಸಲಿವೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ತಿಳಿಸಿದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ನಮ್ಮ ಮತ್ತು ಜೆಡಿಎಸ್ ಪಕ್ಷದ ನಡುವೆ ಅತ್ಯಂತ ವಿಶ್ವಾಸದ ಪರಿಸ್ಥಿತಿ ಇದೆ. ಒಳಿತನ್ನು ಪರಿಗಣಿಸಿ ನಿರ್ಧಾರ ಮಾಡಲಾಗುವುದು ಎಂದರು.
ಎನ್‍ಡಿಎ ಗೆಲ್ಲಬೇಕೆಂಬ ಉದ್ದೇಶವನ್ನು ಪರಿಗಣಿಸಲಾಗುತ್ತದೆ. ಯೋಗೇಶ್ವರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿದ್ದೇವೆ. ಕುಮಾರಣ್ಣನೂ ಕೈಜೋಡಿಸಲಿದ್ದಾರೆ. ನಾವೆಲ್ಲರೂ ಒಂದಾಗಿ ಇರುತ್ತೇವೆ ಎಂದು ತಿಳಿಸಿದರು. ಚುನಾವಣೆ ಘೋಷಣೆ ಆಗಿಲ್ಲ; ದಿನಾಂಕ ಘೋಷಣೆ ಆದಾಗ ಅಭ್ಯರ್ಥಿ ನಿಶ್ಚಯಿಸಿ ಪ್ರಕಟಿಸಲಿದ್ದಾರೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳ ಎನ್‍ಡಿಎ ಅಡಿಯಲ್ಲಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದೇ ಮಾದರಿಯಲ್ಲಿ ನಾವು ಒಗ್ಗಟ್ಟಿನಿಂದ ನಡೆಯಲು ವರಿಷ್ಠರು ತಿಳಿಸಿದ್ದಾರೆ. ನಮ್ಮ ವರಿಷ್ಠರು ಜೆಡಿಎಸ್ ರಾಜ್ಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿಯವರ ಜೊತೆಗೆ ಮಾತುಕತೆ ಮಾಡಿದ್ದಾರೆ. ಅಭ್ಯರ್ಥಿ ಕುರಿತು ಮಾತನಾಡಿ ನಿಶ್ಚಯ ಮಾಡಲು ಒಪ್ಪಂದಕ್ಕೆ ಬಂದಿದ್ದೇವೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.
ಪ್ರಜಾಪ್ರಭುತ್ವದ ಅಡಿಯಲ್ಲಿ ನಾವು ಪ್ರತಿಭಟನೆಗೆ ಮುಂದಾದರೆ ಕಾಂಗ್ರೆಸ್ ಸರಕಾರ ಕೇಸಿನ ಮೇಲೆ ಕೇಸು ಹಾಕುತ್ತದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರ ತಡೆಗಟ್ಟಿ ಜನಪರವಾಗಿ ಕೆಲಸ ಮಾಡಬೇಕಿತ್ತು. ಆದರೆ, ಅವರು ತಮ್ಮ ಭ್ರಷ್ಟ ನಾಯಕರ ರಕ್ಷಣೆಗಾಗಿ ರಾಜಭವನ ಚಲೋ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಕಾಂಗ್ರೆಸ್ ಪಕ್ಷದ ವರಿಷ್ಠರಿಗೂ ನೈತಿಕತೆ ಇಲ್ಲ; ಇಲ್ಲಿನ ಮುಖಂಡರಿಗೂ ನೈತಿಕತೆ ಇಲ್ಲ ಎಂದು ಟೀಕಿಸಿದ ಅವರು, ಕಾರ್ಯಕರ್ತರಿಗೂ ನೈತಿಕತೆ ಇಲ್ಲ ಎಂದರು. ಭ್ರಷ್ಟಾಚಾರ ಮಾಡಿದ ಇವರ ನಾಯಕರು ಮೊದಲು ರಾಜೀನಾಮೆ ಕೊಡಬೇಕು ಎಂದು ಅವರು ಆಗ್ರಹಿಸಿದರು.
ಅಧಿಕಾರ ದುರ್ಬಳಕೆ ಮಾಡಿ ಸ್ಪಷ್ಟವಾಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ಆದ್ದರಿಂದ ರಾಜೀನಾಮೆ ಕೊಟ್ಟು ಗೌರವ ಹೆಚ್ಚಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಅಶ್ವತ್ಥ ನಾರಾಯಣ ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
