ಬೆಂಗಳೂರು: ಮಳೆಯ ತೀವ್ರ ಕೊರತೆ ನಡುವೆಯೂ ಕಾವೇರಿ ನದಿ ನೀರನ್ನು ವ್ಯಾಪಕವಾಗಿ ತಮಿಳುನಾಡಿಗೆ ಹರಿಸುತ್ತಿರುವುದರ ಹಿಂದೆ ಡಿಎಂಕೆ ಜತೆಗಿನ ಸ್ನೇಹ ಹಾಗೂ ಲೋಕಸಭೆ ಚುನಾವಣೆ ಲೆಕ್ಕಾಚಾರ ಎಂಬ ಟೀಕೆಗಳು ಬರುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.
“ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ನ್ಯಾಯಾಲಯದ ಆದೇಶ ಗೌರವಿಸಿ, ಅದನ್ನು ಪಾಲಿಸಿದ್ದೇವೆ. ಜತೆಗೆ ನಮ್ಮ ರೈತರ ಹಿತವನ್ನು ಕಾಯಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿ, “ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು. ಈ ಹಿಂದೆ ಇದ್ದ ಸರ್ಕಾರಗಳು ನ್ಯಾಯಾಲಯದ ಆದೇಶಗಳನ್ನು ಇದೇ ರೀತಿ ಪಾಲಿಸಿವೆ. ನೀರು ಬಿಡುಗಡೆ ಮಾಡಿವೆ. ಆದರೆ ನಮ್ಮ ರೈತರ ಹಿತ ಕಾಪಾಡುವುದು ನಮ್ಮ ಮೇಲಿರುವ ದೊಡ್ಡ ಜವಾಬ್ದಾರಿ. ನೀರು ಬಿಟ್ಟಿರುವುದನ್ನು ಪ್ರಶ್ನಿಸಿ ವಿರೋಧ ಮಾಡುತ್ತಾರೆ. ಅದು ಸಹಜ ಎಂದರು.
ಸರ್ಕಾರ ಇಂತಹ ಸಮಯದಲ್ಲಿ ಸಮತೋಲಿತವಾಗಿ ಕೆಲಸ ಮಾಡಬೇಕಿದೆ. ಮಳೆ ಕಡಿಮೆ ಆಗಿರುವುದರಿಂದ ಕೃಷಿಗೆ ಮಾತ್ರವಲ್ಲ, ಕುಡಿಯಲು ನೀರಿಲ್ಲ. ಇದೇ ಕಾರಣಕ್ಕೆ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸಲು ಮನವಿ ಮಾಡಿದ್ದೇವೆ ಎಂದು ಹೇಳಿದರು.
ಈ ಹಿಂದೆ ಇಂತಹ ಪರಿಸ್ಥಿತಿಯಲ್ಲಿ ಜನತಾ ದಳ ಹಾಗೂ ಬಿಜೆಪಿ ಸರ್ಕಾರಗಳು ಎಷ್ಟು ನೀರು ಬಿಟ್ಟಿದ್ದವು ಎಂಬ ಅಂಕಿ ಅಂಶ ನೀಡಬಲ್ಲೆ. ಆದರೆ ಈ ವಿಚಾರದಲ್ಲಿ ರಾಜಕೀಯ ಮಾಡಲು ಇಷ್ಟವಿಲ್ಲ. ಕಾವೇರಿ, ಮಹಾದಾಯಿ, ಕೃಷ್ಣಾ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆಯಲು ಆಲೋಚಿಸಿದ್ದೇವೆ. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ಅಧಿಕಾರದಲ್ಲಿದ್ದರೂ ಮಹಾದಾಯಿ, ಕೃಷ್ಣ ವಿಚಾರ ಇತ್ಯರ್ಥವಾಗಿಲ್ಲ. ಈ ಬಗ್ಗೆಯೂ ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four + 20 =
Remember me
