ಬೆಂಗಳೂರು:ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ) ಸಿಎಂ ಸಿದ್ದರಾಮಯ್ಯ ಕುಟುಂಬದವರಿಗೆ ಕಾನೂನುಬಾಹಿರವಾಗಿ 14 ಬದಲಿ ನಿವೇಶನಗಳ ಹಂಚಿಕೆ ಮಾಡಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 40 ಕೋಟಿ ರೂ.ಗಿಂತ ಅಧಿಕ ಮೊತ್ತ ನಷ್ಟವಾಗಿದೆ ಎಂದು ಭ್ರಷ್ಟಚಾರ ವಿರೋಧಿ ವೇದಿಕೆ ಅಧ್ಯಕ್ಷ, ಬಿಜೆಪಿ ಮುಖಂಡ ಎನ್​.ಆರ್​. ರಮೇಶ್​ ಗಂಭೀರ ಆರೋಪ ಮಾಡಿದ್ದಾರೆ.
ನಗರಾಭಿವೃದ್ಧಿ ಇಲಾಖೆ ನಿಯಮದನ್ವಯ ಬಡಾವಣೆ ನಿರ್ಮಾಣ ಉದ್ದೇಶಕ್ಕಾಗಿ ರೈತರ ಜಮೀನು ಸ್ವಾಧಿನ ಮಾಡಿಕೊಂಡರೆ, ಅದೇ ಬಡಾವಣೆಯಲ್ಲಿ ಭೂಮಾಲೀಕರಿಗೆ ನಿವೇಶನ ಹಂಚಿಕೆ ಮಾಡಬೇಕು. ಆ ಬಡಾವಣೆಯ ನಂತರ ಪ್ರಾಧಿಕಾರವು ಅಭಿವೃದ್ಧಿಪಡಿಸುವ ಬಡಾವಣೆಯಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಬೇಕು. ಮುಂಚಿತವಾಗಿ ಅಭಿವೃದ್ಧಿಪಡಿಸಿದ ಬಡಾವಣೆಗಳಲ್ಲಿ ಬದಲಿ ನಿವೇಶನ ಹಂಚಿಕೆ ಮಾಡುವಂತಿಲ್ಲ. ಆದರೆ, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನಗಳ ಬದಲಾಗಿ ವಿಜಯನಗರ 3 ಮತ್ತು 4ನೇ ಹಂತದ ಬಡಾವಣೆಗಳಲ್ಲಿದ್ದ 14 ದುಬಾರಿ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಕಾನೂನುಬಾಹಿರ ಎಂದು ಸುದ್ದಿಗೋಷ್ಠಿಯಲ್ಲಿ ದಾಖಲೆ ಸಮೇತ ವಿವರಿಸಿದರು.
ಮುಡಾ ಹಿಂದಿನ ಅಧ್ಯಕ್ಷ ರಾಜೀವ್​, ಆಗ ಆಯುಕ್ತರಾಗಿದ್ದ ಡಿ.ಬಿ. ನಟೇಶ್​ ಕಾನೂನುಬಾಹಿರ ಕಾರ್ಯದಲ್ಲಿ ತೊಡಗಿದ್ದಾರೆ. ಸಿದ್ದರಾಮಯ್ಯ ಅವರು 1997&98ರ ಅವಧಿಯಲ್ಲಿ ಜೆ.ಎಚ್​.ಪಟೇಲ್​ ಹಾಗೂ 2004ರಿಂದ 2006ರಲ್ಲಿ ಧರ್ಮಸಿಂಗ್​ ಸಂಪುಟದಲ್ಲೂ ಡಿಸಿಎಂ ಆಗಿದ್ದರು. 2013ರಿಂದ 2018ರವರೆಗೆ ಮುಖ್ಯಮಂತ್ರಿ. ಹೀಗೆ ಸಿದ್ದರಾಮಯ್ಯ ಅಧಿಕಾರದಲ್ಲಿ ಇರುವಾಗಲೇ ಬದಲಿ ನಿವೇಶನ ಪ್ರಕರಣ ನಡೆದಿದೆ ಎಂದು ಎನ್​.ಆರ್​. ರಮೇಶ್​ ದೂರಿದರು.
ವರುಣಾರ್ಭಟಕ್ಕೆ ಶುಂಠಿ ಸೇರಿ ಹಲವು ಬೆಳೆಗೆ ರೋಗಬಾಧೆ ಆತಂಕ
ಲೋಕಾಯುಕ್ತಕ್ಕೆ ದೂರು ದಾಖಲುಸುದ್ದಿಗೋಷ್ಠಿ ನಡೆಸಿದ ಬಳಿಕ ಎನ್​.ಆರ್​.ರಮೇಶ್​, 383 ಪುಟಗಳಸಹಿತ ಮುಡಾ ಹಗರಣ ಕುರಿತು ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಮಲ್ಲಿಕಾರ್ಜುನಸ್ವಾಮಿ, ಬಸವೇಗೌಡ, ರಾಜೀವ್​, ನಟೇಶ್​ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ, ಭ್ರಷ್ಟಾಚಾರ ಕೇಸ್​ ದಾಖಲಿಸಿಕೊಂಡು ಕಠಿಣ ಕ್ರಮಕೈಗೊಳ್ಳುವಂತೆ ಲೋಕಾಯುಕ್ತರಿಗೆ ಮನವಿ ಮಾಡಿದರು.
ಮೈಸೂರಿನ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಪ್ರತಿ ಚದರಡಿಗೆ ಐದು ಸಾವಿರ ರೂ. ಇದೆ. ವಿಜಯನಗರ 3 ಮತ್ತು 4ನೇ ಹಂತದ ಬಡಾವಣೆಗಳಲ್ಲಿ ಪ್ರತಿ ಚದರಡಿಗೆ 12 ಸಾವಿರ ರೂ. ಇದೆ. ದೇವನೂರು ಬಡಾವಣೆ ಬದಲಾಗಿ ವಿಜಯನಗರದಲ್ಲಿ ಒಟ್ಟು 38,284 ಚದರಡಿ ವಿಸ್ತೀರ್ಣದ 14 ನಿವೇಶನಗಳನ್ನು ಬದಲಿಯಾಗಿ ಸಿಎಂ ಪತ್ನಿ ಹೆಸರಿಗೆ ಹಂಚಿಕೆ ಮಾಡಿ ಅಕ್ರಮವೆಸಗಿದ್ದಾರೆ.|ಎನ್​.ಆರ್​.ರಮೇಶ್​. ಬಿಜೆಪಿ ಮುಖಂಡ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 11 =
Remember me
