ಬೆಂಗಳೂರು:ರಾಜ್ಯದಲ್ಲಿ 10 ಎಕರೆ ವರೆಗಿನ ಜಮೀನು ಮಂಜೂರಾತಿ ಹಾಗೂ 15 ರಿಂದ 500 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆಗಳನ್ನು ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ ಮುಂದೆ ಮಂಡಿಸಲು ಸರ್ಕಾರ ಸೂಚನೆ ನೀಡಿದೆ.
ಈ ಹಿಂದೆ ಭೂ ಪರಿಶೀಲನಾ ಸಮಿತಿ ಮುಂದೆ ಮಂಡಿಸಲಾಗುತ್ತಿತ್ತು. ಇನ್ನು ಮುಂದೆ ರಾಜ್ಯಮಟ್ಟದ ಸಮಿತಿ ಮುಂದೆ ಮಂಡಿಸಲು ಸುತ್ತೋಲೆ ಹೊರಡಿಸಲಾಗಿದೆ. ಎರಡು ಎಕರೆವರೆಗಿನ ವಿಸ್ತೀರ್ಣದ ಹಾಗೂ 15 ಕೋಟಿ ರೂ. ವರೆಗಿನ ಬಂಡವಾಳದ ಪ್ರಸ್ತಾವನೆಗಳನ್ನು ಆಯಾ ಜಿಲ್ಲಾ ಮಟ್ಟಿದ ಏಕಗವಾಕ್ಷಿ ಅನುಮೋದನಾ ಸಮಿತಿ ಮಂಡಿಸಿ ಅನುಮೋದನೆ ಪಡೆಯಬಹುದು.
ಹತ್ತು ಎಕರೆವರೆಗಿನ ವಿಸ್ತೀರ್ಣದ ಹಾಗೂ 15 ರಿಂದ 500 ಕೋಟಿ ರೂ.ವರೆಗಿನ ಬಂಡವಾಳದ ಪ್ರಸ್ತಾವನೆಗಳನ್ನು ಭೂ ಪರಿಶೀಲನಾ ಸಮಿತಿ ಮುಂದೆ ಮಂಡಿಸದೆ ನೇರವಾಗಿ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ ಮುಂದೆ ಪರಿಶೀಲನೆಗಾಗಿ ಮಂಡಿಸಲು ತಿಳಿಸಲಾಗಿದೆ.
ರಾಜ್ಯ ಉನ್ನತಮಟ್ಟದ ಅನುಮೋದನಾ ಸಮಿತಿಯ ಮುಂದೆ ಮಂಡಿಸುವ ಎಲ್ಲ ಪ್ರಸ್ತಾವನೆಗಳನ್ನು ಭೂ ಪರಿಶೀಲನಾ ಸಮಿತಿಯ ಮುಂದೆ ಮಂಡಿಸಿ, ಅದರ ನಿರ್ಣಯದಂತೆ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಅನುಮೋದನೆಗೆ ಮಂಡಿಸುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಎಲ್ಲ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
