ಬೆಂಗಳೂರು:ಲೋಕಸಭಾ ಚುನಾವಣೆ ಮುಗಿದ ಬಳಿಕ ಹೊಸದಾಗಿ ಬಿಪಿಎಲ್​, ಎಪಿಎಲ್​ ಕೋರಿ ಆಹಾರ ಇಲಾಖೆ ಸಲ್ಲಿಸಿರುವ ಅರ್ಜಿಗಳ ವಿಲೇಗೆ ಅನುಮತಿ ಸಿಗುವ ಸಾಧ್ಯತೆ ಇದೆ.
ಬಾಕಿ ಉಳಿದಿರುವ ಅರ್ಜಿಗಳ ವಿಲೇಗೆ ಮಾರ್ಚ್​ ಅಥವಾ ಏಪ್ರಿಲ್​ನಲ್ಲಿ ಮಾಡುವುದಾಗಿ ಆಹಾರ ಸಚಿವ ಕೆ.ಎಚ್​. ಮುನಿಯಪ್ಪ ಹೇಳಿದ್ದರು. ಆದರೆ, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಮುಗಿದ ಬಳಿಕ ಸರ್ಕಾರ ಅರ್ಜಿಗಳ ವಿಲೇಗೆ ಅನುಮತಿ ನೀಡುವ ಸಾಧ್ಯತೆ ಇದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್​ಎ್​ಎಸ್​ಎ) ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಶೇ.76.04 ನಗರ ಪ್ರದೇಶಗಳಲ್ಲಿ ಶೇ.49.36 ಸೇರಿ ಒಟ್ಟು 3,58,87,666 ಲಾನುಭವಿಗಳಿಗೆ 1,03,70,669 ಬಿಪಿಎಲ್​ ಕಾರ್ಡ್​ ನೀಡಬೇಕೆಂಬ ನಿಯಮವಿದೆ. ಆದರೆ, ರಾಜ್ಯದಲ್ಲಿ ಸದ್ಯ 3,92,54,052 ಲಾನುಭವಿಗಳಿಗೆ 1,16,98,551 ರೇಷನ್​ ಕಾರ್ಡ್​ಗಳನ್ನು ನೀಡಲಾಗಿದೆ. ನಿಗದಿಗಿಂತ ಹೆಚ್ಚುವರಿಯಾಗಿ 13,27,882 ಬಿಪಿಎಲ್​ ಕಾರ್ಡ್​ ನೀಡಲಾಗಿದೆ. ಹೊಸ ರೇಷನ್​ ಕಾರ್ಡ್​ ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳು ಬಾಕಿ ಉಳಿದಿವೆ. ಸರ್ಕಾರ ಅನುಮತಿ ಕೊಟ್ಟರೆ “ಅನರ್ಹರ ಪತ್ತೆ ಮೊದಲು; ಪಡಿತರ ಚೀಟಿ ವಿತರಣೆ ಆನಂತರ’ ಎಂಬ ಸೂತ್ರವನ್ನು ಇಲಾಖೆ ಅಳವಡಿಸಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ.
ರೇಷನ್​ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್​ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್​, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಸೆ.1ರಿಂದ ಸೆ.10ರವರೆಗೆ ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್​ ಹಾಗೂ ಕರ್ನಾಟಕ ಓನ್​ ಸೇರಿ ಇತರ ಕಡೆಗಳಲ್ಲಿ ರೇಷನ್​ ಕಾರ್ಡ್​ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದು. ಈಗ ಅದನ್ನು ಸ್ಥಗಿತಗೊಳಿಸಲಾಗಿದೆ.
ಬಾಲಿವುಡ್​ ಸೂಪರ್​ ಸ್ಟಾರ್ ಸಲ್ಮಾನ್ ಖಾನ್ ಅವರ ಮದುವೆ ಪ್ರಸ್ತಾಪವನ್ನು ಈ ನಟಿ ತಿರಸ್ಕರಿಸಿದ್ದೇಕೆ?
ಅರ್ಜಿ ಪರಿಶೀಲಿಸಿರುವ ಇಲಾಖೆಹಿಂದಿನ ಬಿಜೆಪಿ ಸರ್ಕಾರವಿದ್ದಾಗ, ಬಾಕಿ ಉಳಿದಿರುವ ಅರ್ಜಿಗಳನ್ನು ನಿಗದಿಪಡಿಸಿದ ಮಾನದಂಡ ಆಧಾರದಲ್ಲಿ ಪರಿಶೀಲಿಸಬೇಕು. ಯಾವುದೇ ಅರ್ಜಿಯೂ ಅನರ್ಹವಾಗಿದ್ದಲ್ಲಿ ಅದನ್ನು ಎಪಿಎಲ್​ ಕಾರ್ಡ್​ಗೆ ಶಿಾರಸ್ಸು ಮಾಡಬೇಕು. ಪ್ರತಿ ಅರ್ಜಿ ಪರಿಶೀಲಿಸುವ ವೇಳೆ ಅರ್ಜಿದಾರರು ಜಂಟಿ ಕುಟುಂಬವೇ, ಜಂಟಿ ಕುಟುಂಬದಿಂದ ಪ್ರತ್ಯೇಕವಾಗಲು ಅರ್ಜಿ ಸಲ್ಲಿಸುವವರೇ, ಎಪಿಎಲ್​ ಚೀಟಿ ಹೊಂದಿರುವವರೇ ಅಥವಾ ಈಗಾಗಲೇ ಯಾವುದಾದರೂ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅರ್ಜಿಗಳ ಅರ್ಹತೆ ಮತ್ತು ಅನರ್ಹತೆ ಬಗ್ಗೆ ಪರಿಶೀಲಿಸಬೇಕೆ ಹೊರತು ಹೊಸ ಕಾರ್ಡ್​ನ್ನು ಮಂಜೂರು ಮಾಡಬಾರದು ಎಂದು ಆದೇಶಿಸಿತ್ತು. ಅದರಂತೆ, ಬಾಕಿ ಉಳಿದಿರುವ ಅರ್ಜಿಗಳನ್ನು ಮೇಲಿನ ನಿಯಮಗಳಂತೆ ಇಲಾಖೆ ಪರಿಶೀಲಿಸಿ ಮಂಜೂರಾತಿಗೆ ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 1 =
Remember me
