ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ, ರಾಜ್ಯದ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಲಿ ಎಂದು ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾವೇರಿ ಹಾಗೂ ಮಹದಾಯಿ ನದಿ ನೀರು ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷದ ಸಭೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸದೇ, ರಾಜ್ಯದ ರೈತರಿಗೆ ನೀರು ಬಿಡದೇ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಲ್ಲ ಎಂದು ಸರ್ಕಾರಕ್ಕೆ ಹೇಳಿದ್ದೇವೆ. ಆದರೆ, ಅವರು ಅದನ್ನು ಒಪ್ಪಲು ಸಿದ್ಧರಿಲ್ಲ. ನೆಲ ಜಲ ವಿಚಾರದಲ್ಲಿ ನಮ್ಮ ರಾಜ್ಯದ ಹಿತರಕ್ಷಣೆ ಮಾಡುವುದರಲ್ಲಿ ನಾವು ಬೆಂಬಲ ಕೊಡುತ್ತಾ, ಅವರು ಮೊದಲ ಹಂತದಲ್ಲಿ ಎಲ್ಲೆಲ್ಲಿ ಎಡವಿದ್ದಾರೆ ಎಂದು ಹೇಳಿದ್ದೇವೆ.ಸಿಡಬ್ಲ್ಯುಎಂಎದಲ್ಲಿ ಸರಿಯಾಗಿ ವಾದ ಮಾಡುವುದರಲ್ಲಿ, ಸುಪ್ರೀಂಕೋರ್ಟ್ ಗೆ ಹೋಗದೆ ಇರುವುದರಲ್ಲಿ ಎಡವಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ್ದೇವೆ ಅವರು ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ ಎಂದರು.
ತಮಿಳುನಾಡಿಗೆ 10 ಸಾವಿರ ಕ್ಯುಸೆಕ್ಸ್ ನೀರು ಬಿಡುವ ಪರಿಸ್ಥಿತಿಯಲ್ಲಿ ಇಲ್ಲಾ. ನಮ್ಮ ರೈತರಿಗೆ ನೀರು ಬಿಡದೆ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ತಂದುಕೊಂಡಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಇದರ ಬಗ್ಗೆ ಮನವರಿಕೆ ಮಾಡಿಕೊಟ್ಟು ನೀರು ಬಿಡದಂತೆ ನೊಡಿಕೊಳ್ಳುವುದು ಬಹಳ ಮುಖ್ಯ ಎಂದರು.
ನಮ್ಮ ಜಲಾಶಯಗಳಲ್ಲಿ ಅವತ್ತು 93 ಟಿಎಂಸಿ ನೀರಿತ್ತು. ಇತ್ತು ಈಗ 7೦ ಟಿಎಂಸಿ ಮಾತ್ರ ನೀರು ಇದೆ.ಇದೇ ರೀತಿ ಮಾಡಿದರೆ, ನಮ್ಮ ರೈತರಿಗೆ ನೀರು ಕೊಡಲು ಅಗುವುದಿಲ್ಲ. ಬರುವಂತವ ಎರಡು ತಿಂಗಳ ನಂತರ ಬೆಂಗಳೂರಿಗೂ ಸಂಕಷ್ಟವಾಗುತ್ತದೆ. ಇದನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಬೇಕು. ನೆಲಜಲ ವಿಚಾರದಲ್ಲಿ ರಾಜಕಾರಣ ಮಾಡದೇ. ರಾಜ್ಯ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದೇವೆ. ಶುಕ್ರವಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ವಿಚಾರಣೆಗೆ ಬರಲಿದೆ. ಏನಾಗುತ್ತದೆಯೋ ಕಾದು ನೋಡೋಣ ಎಂದರು.
ಇನ್ನು ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸದೇ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ ತೆಗೆದುಕೊಂಡು ಹೋಗುವುದಾಗಿ ಹೇಳಿದರು. ಮೊದಲು ಸುಪ್ರಿಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ನಂತರ ಸರ್ವ ಪಕ್ಷ ನಿಯೋಗ ತೆಗೆದುಕೊಂಡು ಹೋಗುವ ಬಗ್ಗೆ ಆಲೋಚಿಸುವಂತೆ ಸಲಹೆ ನೀಡಿರುವುದಾಗಿ ತಿಳಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight + 2 =
Remember me
