ಬೆಂಗಳೂರು:ಮೇಕೆದಾಟು ಯೋಜನೆಯಡಿ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ವ್ಯವಸ್ಥೆ, ಹಳ್ಳಿಗಳ ಸ್ಥಳಾಂತರ ಮತ್ತು ಪುನರ್ವಸತಿಗೆ ಪರ್ಯಾಯ ಜಮೀನು ಗುರುತಿಸುವ ಪ್ರಕ್ರಿಯೆ ಚುರುಕಾಗಿದೆ ಎಂದು ಜಲ ಸಂಪನ್ಮೂಲ ಖಾತೆ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಮಂಗಳವಾರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯಡಿ ಬೇಕಾಗುವ ಅರಣ್ಯ ಪ್ರದೇಶವನ್ನು ಗುರುತಿಸಲಾಗಿದೆ. ಹಾಗೆಯೇ ಜನರಿಗೆ ಪರ್ಯಾಯ ಜಾಗಗಳನ್ನು ಚಾಮರಾಜನಗರ, ಮಂಡ್ಯ ಮತ್ತು ರಾಮನಗರದಲ್ಲಿ ಗುರುತಿಸಿದ್ದು, ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದರು.
ಮೇಕೆದಾಟು ಯೋಜನೆಗೆ ಅನುಮತಿ ಕೋರಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಅಧಿಕೃತ ಪ್ರಸ್ತಾವನೆ ಸಲ್ಲಿಸಿರುವುದನ್ನು ಸ್ಮರಿಸಬಹುದು. ಯೋಜನೆಯಡಿ 67.16 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಸಮತೋಲನ ಅಣೆಕಟ್ಟು ನಿರ್ಮಿಸಬೇಕೆಂದಿದೆ.
ಬೆಂಗಳೂರು ಮಹಾನಗರ, ರಾಮನಗರ ಜಿಲ್ಲೆಗೆ ಕುಡಿಯುವ ನೀರು ಪೂರೈಕೆ, 400 ಮೆಗಾ ವಾಟ್ ವಿದ್ಯುತ್ ಉತ್ಪಾದನೆ ಯೋಜನೆ ಉದ್ದೇಶವಾಗಿದೆ. ಅಷ್ಟೇ ಅಲ್ಲ, ತಮಿಳುನಾಡಿಗೆ ಸಂಕಷ್ಟ ಕಾಲದಲ್ಲಿ ನೆರವಾಗಲಿದೆ.
ಒಟ್ಟು 5252.40 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ ತಲೆ ಎತ್ತಲಿದೆ. ಇದಕ್ಕಾಗಿ ಕಾವೇರಿ ಅಭಯಾರಣ್ಯದ 3181.90 ಹೆಕ್ಟೇರ್, ಅರಣ್ಯ ಪ್ರದೇಶ 1869.50 ಹೆಕ್ಟೇರ್ ಜಮೀನು ಬೇಕಾಗಲಿದೆ.
ತಮಿಳುನಾಡು ವಿಧಾನಸಭೆ ಒಕ್ಕೊರಲಿನಿಂದ ಅಂಗೀಕರಿಸಿದ ನಿರ್ಣಯದತ್ತ ಪತ್ರಕರ್ತರು ಗಮನಸೆಳೆದಾಗ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಲು ನಿರಾಕರಿಸಿದರು.ತಮಿಳುನಾಡು ಸರ್ಕಾರ ಏನಾದರೂ ನಿರ್ಣಯ ತೆಗೆದುಕೊಂಡಿರಲಿ, ಅವರಿಗೆ ಬಿಟ್ಟದ್ದು. ಅವರು ತೆಗೆದುಕೊಂಡ ನಿರ್ಣಯಕ್ಕೆ ನಾನೇಕೆ ಉತ್ತರಿಸಲಿ ?. ನಮ್ಮ ಸರ್ಕಾರ ನಮ್ಮ ರೈತರ ರಕ್ಷಣೆ ಮಾಡಿಕೊಂಡು ಬಂದಿದೆ ಎಂದರು.
ಪ್ರಾಧಿಕಾರದ ಆದೇಶದಂತೆ ನೀರು ಬಿಡುತ್ತಿಲ್ಲ, ಕರ್ನಾಟಕ ಕೃತಕ ಅಭಾವ ಸೃಷ್ಟಿಸಿ ತಪ್ಪಿಸಿಕೊಳ್ಳುತ್ತಿದೆ ಎಂಬ ತಮಿಳುನಾಡಿನ ನಿಲುವಿಗೂ ಡಿ.ಕೆ.ಶಿವಕುಮಾರ್ ನೇರವಾಗಿ ಉತ್ತರಿಸಲಿಲ್ಲ.
ಕೃತಕವೋ, ಸಹಜವೋ ಏನು ಎಂದು ನಿಮಗೆ (ಪತ್ರಕರ್ತರು) ಗೊತ್ತಿದೆ. ನಮಗಿರುವ ಬರದ ಪರಿಸ್ಥಿತಿ ೋಷಿಸಿದ್ದೇವೆ. ಬರ ಅಧ್ಯಯನಕ್ಕೆ ಬಂದಿದ್ದ ಕೇಂದ್ರ ಅಧಿಕಾರಿಗಳ ತಂಡವೂ ಪರಿಶೀಲನೆ ಮಾಡಿದೆಯಲ್ಲ ಎಂದರು.
ಸೋಮವಾರ ಅಲ್ಪ ಪ್ರಮಾಣದ ಮಳೆಯಾಗಿದೆ, ಕಾವೇರಿ ಕಣಿವೆ ಎಲ್ಲ ಜಲಾಶಯಗಳು ಸೇರಿ ಒಟ್ಟು ಎಂಟು ಸಾವಿರ ಕ್ಯೂಸೆಕ್ ಒಳಹರಿವು ಬಂದಿದೆ. ನಾಡಿದ್ದು, ಪ್ರಾಧಿಕಾರದ ಸಭೆಯಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ನಮಗೆ ಸೂಚಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 8 =
Remember me
