ಮಂಡ್ಯ: ಮಂಡ್ಯ ನಗರಸಭೆ ವ್ಯಾಪ್ತಿಯ ಒಂದು ವೃತ್ತಕ್ಕೆ ಅಮರಶಿಲ್ಪಿ ಜಕಣಚಾರಿ ಹೆಸರನ್ನು ನಾಮಕರಣಗೊಳಿಸಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಶುಕ್ರವಾರ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ವಿಶ್ವಕರ್ಮ ಸಮುದಾಯದ ಮೂಲಪುರುಷ ಅಮರಶಿಲ್ಪಿ ಜಕಣಚಾರಿ ಅವರು ಹಲವರು ವಿಶಿಷ್ಟ ಮತ್ತು ವೈವಿದ್ಯಮಯ ದೇವಾಲಯಗಳನ್ನು ನಿರ್ಮಿಸಿದ್ದಾರೆ. ಈ ಮೂಲಕ ನಾಡು ಮತ್ತು ದೇಶದ ಶಿಲ್ಪಕಲೆಯನ್ನು ಶ್ರೀಮಂತಗೊಳಿಸಿದ್ದಾರೆ. ಅವರು ನಿರ್ಮಿಸಿರುವ ದೇವಾಲಯಗಳು ಇಂದಿಗೂ ಪ್ರಸಿದ್ದ ಪ್ರವಾಸಿ ತಾಣವಾಗಿವೆ ಎಂದರು.ಶಿಲ್ಪಕಲೆಯನ್ನು ಶ್ರೀಮಂತಗೊಳಿಸಿದ ನಾಡಿನ ಸಾಂಸ್ಕೃತಿಕ ಪಿತಮಹಾ ಎಂದರೂ ತಪ್ಪಾಗಲಾರದು. ಈಗಾಗಲೇ ಸರ್ಕಾರ ಜ.1ರಂದು ಅವರ ಸಂಸ್ಮರಣಾ ದಿನವನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕರ್ನಾಟಕ ಬಾರ್ ಅಥವಾ ನೂರಡಿ ರಸ್ತೆಯ ಕನ್ನಿಕಾ ಪರಮೇಶ್ವರಿ ದೇವಾಯಲ, ಮೈ-ಬೆಂ ಹೆದ್ದಾರಿ ಕಲ್ಲಹಳ್ಳಿ, ತಾವರಕೆರೆಯ ಉದಯಗಿರಿ ವ್ಯಾಪ್ತಿಯ ಯಾವುದಾದರೂಂದು ವೃತ್ತಕ್ಕೆ ಅವರ ಹೆಸರನ್ನು ಇಡುವ ಮೂಲಕ ಗೌರವ ಸೂಚಿಸಬೇಕು ಎಂದು ಮನವಿ ಮಾಡಿದರು.ಮಹಾಸಭಾದ ಬಸವರಾಜು, ಕುಮಾರಸ್ವಾಮಿ, ಶ್ರೀನಿವಾಸ್ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + eighteen =
Remember me
