ಬೆಂಗಳೂರುಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಯುವ ವಸತಿ ಶಾಲೆಗಳಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಶೇ.96 ಲಿತಾಂಶ ಪ್ರಕಟವಾಗಿದ್ದು, ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲವೆಂದು ತೋರಿಸಿವೆ.
ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವಿಲ್ಲ, ಉತ್ತಮ ಶಿಕ್ಷಕರಿಲ್ಲ, ಅತಿಥಿ ಶಿಕ್ಷಕರಲ್ಲಿಯೇ ಶಾಲೆಗಳನ್ನು ನಡೆಸಲಾಗುತ್ತಿದೆ. ಮೂಲ ಸೌಕರ್ಯದ ಕೊರತೆ ಇದೆ ಎಂಬ ಹತ್ತಾರು ಕಾರಣಗಳನ್ನು ನೀಡಿ ಸರ್ಕಾರಿ ಶಾಲೆಗಳನ್ನು ದೂಷಿಸಲಾಗುತ್ತದೆ. ಅದೆಲ್ಲ ಸವಾಲುಗಳನ್ನು ಮೆಟ್ಟಿ ನಿಂತಿರುವ ವಸತಿ ಶಾಲೆಗಳು ಶೇ,96 ಲಿತಾಂಶ ನೀಡಿರುವುದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.
ವಿಶೇಷವಾಗಿ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತ ಬಸಪ್ಪ ಕೊಣ್ಣೂರು ಅವರು ರಾಜ್ಯಕ್ಕೆ ಮೊದಲ ಸ್ಥಾನ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಮಂಡ್ಯ ಜಿಲ್ಲೆಯ ತುಂಬಗೆರೆ ಮೊರಾರ್ಜಿ ದೇಸಾಯಿ ಶಾಲೆಯ ನವನೀತ್ ಕೆ.ಸಿ. ಅವರು 623 ಅಂಕಗಳನ್ನು ಪಡೆದು 3ನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಶೇ.81.70ರಷ್ಟು ವಿದ್ಯಾರ್ಥಿಗಳು ಉನ್ನತ ಶ್ರೇಣಿ ಮತ್ತು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
2023-14ನೇ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ಶಾಲೆ, ಇಂದಿರಾಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳು ಸೇರಿ 798 ಶಾಲೆಗಳ 35,303 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 33,891 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇದರಲ್ಲಿ ‘ಎ +’ ದರ್ಜೆಯಲ್ಲಿ 3,126 (ಶೇ.9.22), ‘ಎ’ ದರ್ಜೆಯಲ್ಲಿ 8,108 (ಶೇ.23.92), ‘ಬಿ+’ ದರ್ಜೆಯಲ್ಲಿ 8,753 (ಶೇ.25.83), ‘ಬಿ’ ದರ್ಜೆಯಲ್ಲಿ 7,603 (ಶೇ.22.43), ‘ಸಿ+’ನಲ್ಲಿ 4,992 (ಶೇ.14.73), ‘ಸಿ’ ದರ್ಜೆಯಲ್ಲಿ 1,221 (ಶೇ.3.40) ಮಕ್ಕಳು ಉತ್ತೀರ್ಣರಾಗಿದ್ದಾರೆ. ಕೇವಲ 1,412 (ಶೇ.4)ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣರಾಗಿದ್ದಾರೆ.
ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದ ಮೂಲಕವೇ ಬದುಕಿನಲ್ಲಿ ಹೆಚ್ಚಿನದನ್ನು ಸಾಧಿಸುತ್ತಾರೆ. ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ವೈಜ್ಞಾನಿಕತೆ ಮತ್ತು ವೈಚಾರಿಕತೆಯ ಹಾದಿಯಲ್ಲಿ ಸಾಗಿ ಸಮಾಜವನ್ನು ಹೆಚ್ಚು ಹೆಚ್ಚು ಆರೋಗ್ಯಕಾರಿ ಆಗಿಸಬೇಕು. ಇದು ನನ್ನ ಆಶಯವೂ ಹೌದು, ಶಿಕ್ಷಣದ ಮೂಲ ಆಶಯವೂ ಹೌದು– ಡಾ ಎಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:eighteen − fifteen =
Remember me
