ರಾಯಚೂರು:ಗರ್ಭಿಣಿ ಒಬ್ಬರನ್ನು ಹೆರಿಗೆಗೆಂದು ಆಸ್ಪತ್ರೆಗೆ ಕರೆತರಲು ಹೊರಟಿದ್ದ ಆ್ಯಂಬುಲೆನ್ಸ್​ಗೆ ಅಪಘಾತವಾಗಿದ್ದು, ಸ್ಟಾಪ್​ ನರ್ಸ್​ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಇದನ್ನೂ ಓದಿ:ಪ್ರೀತಿಸಿದವ ಮದುವೆಗೆ ಒಲ್ಲೆ ಎಂದಿದ್ದಕ್ಕೆ ಪ್ರಿಯತಮೆ ಏನು ಮಾಡಿದಳು ಗೊತ್ತೇ? ಮನೆಯವರು ಒಪ್ಪಿದರೂ ದುರಂತ ಅಂತ್ಯ ಕಂಡ ಲವ್​ ಸ್ಟೋರಿ!
ಲಿಂಗಸುಗೂರಿ ತಾಲೂಕಿನ ಪಾಮನಕಲ್ಲೂರಿನಿಂದ ರಾಯಚೂರಿನ ರೀಮ್ಸ್​ ಆಸ್ಪತ್ರೆಗೆ ಗರ್ಭಿಣಿಯನ್ನು ಕರೆತರಬೇಕಿತ್ತು. ಅದಕ್ಕೆಂದು ಸ್ಟಾಪ್​ ನರ್ಸ್​ ಸಂಗಮೇಶ್​ (30)ನೊಂದಿಗೆ ಚಾಲಕ ಹನುಮಪ್ಪ ಆ್ಯಂಬುಲೆನ್ಸ್​ನಲ್ಲಿ ಹೊರಟಿದ್ದಾರೆ. ಈ ವೇಳೆ ಆ್ಯಂಬುಲೆನ್ಸ್​ ಲಿಂಗಸಗೂರಿನ ಸರ್ಜಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಗುರುವಾರ ರಾತ್ರಿ 11 ಗಂಟೆ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಸಂಗಮೇಶ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಹನುಮಪ್ಪನಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ:ಪಕ್ಕದ ಮನೆಯ ಬಾಲಕಿಯನ್ನೇ ರೇಪ್​ ಮಾಡಿದ 61 ವರ್ಷದ ವೃದ್ಧ! ಬಾಲಕಿ ಹೇಳಿದರೂ ತಲೆಯೇ ಕೆಡಿಸಿಕೊಳ್ಳದ ಪೋಷಕರು
ಭತ್ತ ತುಂಬಿದ ಲಾರಿಯನ್ನು ಇಂಡಿಕೇಟರ್​ ಹಾಕದೆಯೇ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಅವಸರದಲ್ಲಿ ಹೊರಟಿದ್ದ ಅಂಬ್ಯುಲೆನ್ಸ್ ಲಾರಿ ಕಾಣಿಸದ ಹಿನ್ನೆಲೆಯಲ್ಲಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅತ್ತಿಗೆ ಮೈದುನನ ಲವ್ವಿ ಡವ್ವಿ! ಮೈದುನ ಮದುವೆಯಾಗ್ತಾನೆ ಅಂತ ತಿಳಿದಾಕ್ಷಣ ಅತ್ತಿಗೆ ಹೀಗಾ ಮಾಡೋದು!?

ಬಸ್ಸೊಳಗೆ ತೂರಿಬಂದ ಪೈಪ್​​- ಶಿಶು ಎತ್ತಿಕೊಂಡಿದ್ದ ಯುವತಿಯ ರುಂಡವೇ ಕಟ್ಟಾಯ್ತು!

ರಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
