ಚಿತ್ರದುರ್ಗ:ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್​ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಮಲ್ಲಾಪುರ ಬಳಿ ನಡೆದಿದೆ.
ಅಪಘಾತದಲ್ಲಿ ತಮಿಳುನಾಡಿನ ತಿರುನಾಳವೇಲಿಯ ಕನಕಮಣಿ(72), ಆಕಾಶ್ (17), ಗುಜರಾತ್​ ಮೂಲದ ಆ್ಯಂಬುಲೆನ್ಸ್​ ಚಾಲಕ ಮೃತಪಟ್ಟಿದ್ಧಾರೆ. ಜ್ಞಾನಶೇಖರ್​(51), ಮೌಳಿ ರಾಜನ್​(45) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ಪರಶುರಾಮ್​ ತಮಿಳುನಾಡು ಮೂಲದ ಕನಕಮಣಿ ಮತ್ತು ಕುಟುಂಬಸ್ಥರು ಅಹಮದಾಬಾದ್​ನಲ್ಲಿ ನೆಲೆಸಿದ್ದಾರೆ. ಕುಟುಂಬದ ಸದಸ್ಯರೊಬ್ಬರು ಅಕಾಲಿಕ ನಿಧನದಿಂದಾಗಿ ಅವರ ಮೃತದೇಹವನ್ನು ಗುಜರಾತಿನಿಂದ ತಮ್ಮ ತವರೂರಿಗೆ ಕೊಂಡೊಯ್ಯುತ್ತಿದ್ದರು.
ಇದನ್ನೂ ಓದಿ:ಒಡಿಶಾ ರೈಲು ದುರಂತ; ಗೂಡ್ಸ್​​ ಟ್ರೈನ್​ನಡಿ ಸಿಲುಕಿ 6 ಕಾರ್ಮಿಕರು ಮೃತ್ಯು
ಚಿತ್ರದುರ್ಗ ತಾಲ್ಲೂಕಿನ ಮಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಆಂಬ್ಯುಲೆನ್ಸ್​ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ನಿರಂತರವಾಗಿ ಪ್ರಯಾಣಿಸುತ್ತಿದ್ದ ಕಾರಣ ಆ್ಯಂಬುಲೆನ್ಸ್​ ಚಾಲಕ ನಿದ್ದೆಗೆ ಜಾರಿದ ಪರಿಣಾಮ ಅಪಘಾತ ಸಂಭವಿಸಿದೆ.
ವೇಗವಾಗಿ ಆ್ಯಂಬುಲೆನ್ಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೀಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ಪರಶುರಾಮ್​ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × five =
Remember me
