ಬೆಳಗಾವಿ:ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದವನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಅಪಘಾತಕ್ಕೀಡಾಗಿ ಆ ಗಾಯಾಳು ಮೃತಪಟ್ಟ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಪಘಾತದ ಮೇಲೆ ಅಪಘಾತ ಸಂಭವಿಸಿದೆ.
ಅಕ್ಬರ್ ಸಾಬ್ ಹುಸೇನ್ ನೇಸರಗಿ (28) ಸಾವಿಗೀಡಾದ ಗಾಯಾಳು. ಸವದತ್ತಿ ದೇವಸ್ಥಾನದ ಬಳಿ ಬಳೆ ವ್ಯಾಪಾರ ಮಾಡುತ್ತಿದ್ದ ಅಕ್ಬರ್​ ಅಪಘಾತಕ್ಕೆ ಒಳಗಾಗಿದ್ದು, ಮೊದಲು ಆತನನ್ನು ಸವದತ್ತಿ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆ ಅಗತ್ಯವಿತ್ತು.
ಹೀಗಾಗಿ ಆತನನ್ನು ಆ್ಯಂಬುಲೆನ್ಸ್​ನಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೊರಡಲಾಗಿತ್ತು. ಆದರೆ ಮಾರ್ಗಮಧ್ಯೆ ಆ್ಯಂಬುಲೆನ್ಸ್​ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಅಕ್ಬರ್ ಸಾವಿಗೀಡಾಗಿದ್ದಾನೆ. ಆತನೊಂದಿಗೆ ಆ್ಯಂಬುಲೆನ್ಸ್​ನಲ್ಲಿದ್ದ ತಾಯಿ ಜನ್ನಿತವಬಿ, ಸಹೋದರ ಮಹಮ್ಮದ್ ಅಲಿ, ಸಂಬಂಧಿ ಮಹಮ್ಮದ್ ಸಾಬ್ ಶೆಫಿ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ದೊಡ್ಡವಾಡ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯಕ್ಕೆ ಎದುರಾಗಿದೆ ಒಂದು ಹೊಸ ಆತಂಕ; ಸರ್ಕಾರದ ಮೊರೆ ಹೋದ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ
ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − three =
Remember me
