ಬೆಂಗಳೂರು:ಎರಡು ದಿನಗಳ ಭೇಟಿಗಾಗಿ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಷಾ, ಇಂದು ಭದ್ರಾವತಿಗೆ ತೆರಳಿ ಆರ್​ಎಎಫ್​ ಘಟಕವನ್ನು ಉದ್ಘಾಟಿಸಿದ್ದಾರೆ. ಕಮಲ ಪಡೆಯ ವರಿಷ್ಠ ಷಾಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಇನ್ನಿತರ ಸಚಿವರು, ನಾಯಕರೂ ಗುಲಾಬಿ ನೀಡಿ ಷಾ ಅವರನ್ನು ಸ್ವಾಗತಿಸಿದರು.
ಬೆಂಗಳೂರಿನಿಂದ ಭದ್ರಾವತಿಗೆ ಹೆಲಿಕಾಪ್ಟರ್​ನಲ್ಲಿ ತೆರಳಿದ ಷಾ ಅಲ್ಲಿ ಆರ್​ಎಎಫ್​ ಘಟಕವನ್ನು ಉದ್ಘಾಟನೆ ಮಾಡಿದರು. ದಕ್ಷಿಣ ಭಾರತದ ಮೊದಲ ಆರ್​ಎಎಫ್​ ಘಟಕದ ಉದ್ಘಾಟನೆಯ ಈ ಸಂದರ್ಭದಲ್ಲಿ ಆಯೋಜಿಸಿದ್ದ ಪೂಜೆಯಲ್ಲೂ ಆಸೀನರಾಗಿ ಷಾ ಗಮನ ಸೆಳೆದರು. ಇಂದು ಸಂಜೆ ಮತ್ತೆ ಬೆಂಗಳೂರಿಗೆ ಮರಳಲಿರುವ ಷಾ, ಎಚ್​ಎಎಲ್ ವಿಮಾನ ನಿಲ್ದಾಣದ ಹೊರಗಡೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ. ಇಲ್ಲಿ ಸುಮಾರು 4ರಿಂದ 5 ಸಾವಿರ ಕಾರ್ಯಕರ್ತರು ಸೇರುವ ಸಾಧ್ಯತೆ ಇದ್ದು, ಆಸನಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.
ನಾಳೆ ಬೆಳಗಾವಿಯಲ್ಲಿ ಷಾ:ಜ. 17ರಂದು ಮಧ್ಯಾಹ್ನ 3ಕ್ಕೆ ಬೆಳಗಾವಿಯಲ್ಲಿ ನಡೆಯಲಿರುವ ಬಿಜೆಪಿಯ ಜನಸೇವಕ ಸಮಾರೋಪ ಸಮಾರಂಭದಲ್ಲಿ ಷಾ ಪಾಲ್ಗೊಳ್ಳಲಿದ್ದಾರೆ. ಬಳಿಕ ನಡೆಯಲಿರುವ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಮಾತನಾಡಿ ನಂತರ ಇತ್ತೀಚೆಗೆ ಅಗಲಿದ್ದ ಸುರೇಶ್​ ಅಂಗಡಿ ಅವರ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ. ಜತೆಗೆ ಬಾಗಲಕೋಟೆಯ ಕೆರಕಲಮಟ್ಟಿ ಗ್ರಾಮದ ಕೇದಾರನಾಥ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಿರಾಣಿ ಸಮೂಹದ ವಿವಿಧ ಕಾರ್ಖಾನೆಗಳ ಉದ್ಘಾಟನೆ, ವಿಸ್ತರಣೆಗೆ ಭೂಮಿ ಪೂಜೆ ಇತ್ಯಾದಿ ಕಾರ್ಯಕ್ರಮಗಳಲ್ಲೂ ಷಾ ಭಾಗಿ ಆಗಲಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 + twelve =
Remember me
