ಮಂಗಳೂರು:ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಲು ಉದ್ದೇಶಿಸಿದ್ದರು. ಆದರೆ ಫೆ.11ರಂದೇ ರೋಡ್​ ಶೋ ನಡೆಸುವ ದಾರಿಯಲ್ಲಿ ಸ್ವಾಮಿ ಕೊರಗಜ್ಜನ ಕೋಲ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೋಲಕ್ಕೆ ಅಡ್ಡಿ ಆಗುತ್ತದೆ ಎನ್ನುವ ಕಾರಣಕ್ಕೆ ಅಮಿತ್​ ಷಾ ರೋಡ್​ ಶೋವನ್ನು ರದ್ದು ಮಾಡಿದ್ದಾರೆ.
ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ಶನಿವಾರ ಕೋಲ ನಿಗದಿಯಾಗಿದೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ರೋಡ್ ಶೋವನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪದವಿನಂಗಡಿ ಬಳಿಯ ಖಾಸಗಿ ಸಭಾಂಗಣದಲ್ಲಿ ನಡೆಯಬೇಕಿದ್ದ ಬಿಜೆಪಿ ಪಕ್ಷದ ಸಭೆಯೂ ಸ್ಥಳಾಂತರವಾಗಿದ್ದು ಮಂಗಳೂರು ಏರ್ ಪೋರ್ಟ್ ಬಳಿಯೇ ಪಕ್ಷದ ಸಭೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇನ್ನು, ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಅಮಿತ್ ಷಾ ಸಮಾವೇಶ ನಡೆಯಲಿದ್ದು. ಈ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಕ್ಯಾಂಪೋ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಸಮಾವೇಶ ಕೂಡ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eighteen =
Remember me
