ಬೆಂಗಳೂರು:ಮಾರ್ಚ್ 31ರ ರಾತ್ರಿ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಕರ್ನಾಟಕದಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಮಾರ್ಚ್ 31 ರಂದು ಬೆಂಗಳೂರಿಗೆ ಆಗಮಿಸಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ, ಏಪ್ರಿಲ್ 1ರಂದು ಹೆಚ್​​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲಿದ್ದಾರೆ.ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಕುಮಾರ ಸ್ವಾಮೀಜಿಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ಸಿದ್ದಗಂಗಾ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2.10ಕ್ಕೆ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಭೇಟಿ ನೀಡಿ, ಸತ್ಯ ಸಾಯಿ ಗ್ರಾಮದ 400 ಬೆಡ್‌ಗಳ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. 4 ಗಂಟೆಗೆ ಅರಮನೆ ಮೈದಾನಕ್ಕೆ ಆಗಮಿಸಲಿರುವ ಶಾ, ಸಹಕಾರ ಇಲಾಖೆಯ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 6 ಗಂಟೆಗೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ರಾತ್ರಿ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸ್ ಆಗಲಿದ್ದಾರೆ.
ವಾಹನ ಸವಾರರಿಗೆ ಶಾಕ್ ಮೇಲೆ ಶಾಕ್: 9 ದಿನದಲ್ಲಿ 8ನೇ ಬಾರಿ ಪೆಟ್ರೋಲ್, ಡೀಸೆಲ್​ ಬೆಲೆ ಏರಿಕೆ!

ಮದುವೆ ಮನೆಯಲ್ಲಿ ಗುಂಡಿನ ಮಳೆಗೈದ ಮಾಜಿ ಸೈನಿಕ; ಸಂಬಂಧಿಕರು ಶಾಕ್, ದಾಖಲಾಯ್ತು ಕೇಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 8 =
Remember me
