ರಾಣೆಬೆನ್ನೂರು:ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್ ತಾವು ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಮೀಸಲಾತಿ ವಾಪಸ್ ಕೊಡುತ್ತೇವೆ ಎನ್ನುತ್ತಿದ್ದಾರೆ. ಆದರೆ, ಎಲ್ಲಿಂದ ತಂದು ಕೊಡುತ್ತೀರಿ. ಯಾರಿಗೆ ಕಡಿಮೆ ಮಾಡಿ ಮುಸ್ಲಿಮರಿಗೆ ಹೆಚ್ಚಿಸುತ್ತೀರಿ. ಲಿಂಗಾಯತರಿಗೆ ಕಡಿಮೆ ಮಾಡುತ್ತೀರಿಯೆ? ಅಥವಾ ಎಸ್ಸಿ, ಎಸ್​ಟಿಯವರಿಗೆ ಕಡಿಮೆ ಮಾಡುತ್ತೀರಾ? ಎಂದು ಕೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಪರವಾಗಿ ಭರ್ಜರಿ ರೋಡ್ ನಡೆಸಿದ ಅವರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಸಿದ್ದರಾಮಯ್ಯ ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ ತೋರಿಸಿದ ಪೊಲೀಸರು
ಕಾಂಗ್ರೆಸ್ ಮುಸ್ಲಿಂ ಸಮುದಾಯಕ್ಕೆ ಶೇ. 4ರಷ್ಟು ಮೀಸಲಾತಿ ನೀಡಿತ್ತು. ನಮ್ಮ ಬೊಮ್ಮಾಯಿ ಸರ್ಕಾರ ಬಂದ ಮೇಲೆ ಅದನ್ನು ತೆಗೆದು ಹಾಕಿದೆ. ಅವರ ಬದಲು ಎಸ್ಸಿ, ಎಸ್​ಟಿ ಹಾಗೂ ಲಿಂಗಾಯತರಿಗೆ ಮೀಸಲಾತಿ ನೀಡಿದೆ. ಆದರೆ, ನಾವು ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿಯನ್ನು ಮತ್ತೆ ಕೊಡುತ್ತೇವೆ ಎಂದು ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ. ಮೀಸಲಾತಿ ಎಲ್ಲಿಂದ ತಂದು ಕೊಡುತ್ತಾರೆ. ನಾವು ನೀಡಿರುವ ಎಸ್ಸಿ, ಎಸ್ಟಿಯವರಿಂದ ಅಥವಾ ಲಿಂಗಾಯತರಿಂದ ಕಿತ್ತು ಕೊಡುತ್ತಾರೆಯೇ ಎಂದು ಕುಟುಕಿದರು.
ಒಂದು ವೇಳೆ ಮುಸ್ಲಿಮರಿಗೆ ಮೀಸಲಾತಿ ನೀಡಬೇಕಾದರೆ ಎಸ್ಸಿ, ಎಸ್​ಟಿ ಅಥವಾ ಲಿಂಗಾಯತರ ಮೀಸಲಾತಿ ಕಡಿಮೆ ಮಾಡಬೇಕಾಗುತ್ತದೆ. ಯಾರಿಗೆ ಮೀಸಲಾತಿ ಕಡಿಮೆ ಮಾಡುತ್ತೀರಿ ಎಂದು ಪ್ರಶ್ನಿಸಿದ ಅವರು, ಮತದಾರರು ಯಾರೂ ಚಿಂತಿಸಬೇಡಿ. ಅವರ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ:‘ನಾನು ಹೇಳಿದ್ದೂ ಆಯ್ತು… ಅವರು ಉತ್ತರಿಸಿದ್ದೂ ಆಯ್ತು’: ‘ವಿಷಕಂಠ’ ಹೇಳಿಕೆ ವಿವಾದ ತಣ್ಣಗಾಗಿಸುವ ಪ್ರಯತ್ನದಲ್ಲಿ ಖರ್ಗೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − three =
Remember me
