ಚಾಮರಾಜನಗರ:ಗುಂಡ್ಲುಪೇಟೆಯಲ್ಲಿ ಭರ್ಜರಿ ರೋಡ್ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಬಾರಿ ಕರ್ನಾಟಕದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಡಬಲ್ ಇಂಜಿನ್ ಸರ್ಕಾರ ಇದ್ದರೆ ಅಭಿವೃದ್ಧಿ ವೇಗವಾಗಿ ಆಗುತ್ತದೆ ಎಂದರು.
ಕಾಂಗ್ರೆಸ್ ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿ ತೆಗದು ಹಾಕಿ, ಲಿಂಗಾಯತರು, ಒಕ್ಕಲಿಗರಿಗೆ ಹಂಚಿದ್ದೇವೆ. ಡಿ.ಕೆ ಶಿವಕುಮಾರ್ ಮುಸ್ಲಿಮರಿಗೆ ಮರಳಿ ಮೀಸಲಾತಿ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯಾರ ಮೀಸಲಾತಿ ಕಡಿಮೆ ಮಾಡಿ ಅವರಿಗೆ ಕೊಡುತ್ತೀರಾ? ಲಿಂಗಾಯತರ ಮೀಸಲಾತಿ ಕಡಿಮೆ ಮಾಡುತ್ತೀರಾ ಅಥವಾ ಒಕ್ಕಲಿಗರ ಮೀಸಲಾತಿ ಕಡಿಮೆ ಮಾಡುತ್ತೀರಾ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಕೂಡಲಸಂಗಮದಲ್ಲಿ ಅನ್ನ ದಾಸೋಹಕ್ಕೆ 5000 ರೂ. ದೇಣಿಗೆ ನೀಡಿದ ರಾಹುಲ್ ಗಾಂಧಿ
ಅಮಿತ್ ಷಾ ಮಾತನಾಡುತ್ತಾ, ಕಾಂಗ್ರೆಸ್​ ತುಷ್ಟೀಕರಣ ರಾಜಕಾರಣ ಮಾಡುತ್ತಾ ಬರುತ್ತಿದೆ. ಆದರೆ ಮೋದಿ ನೇತೃತ್ವದ ಸರ್ಕಾರ ವಿಕಾಸ ರಾಜಕಾರಣ ಮಾಡುತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಬಿರುಬಿಸಿಲನ್ನು ಲೆಕ್ಕಿಸದ ನೆರೆದಿರುವ ಬಿಜೆಪಿಯ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆದಿದೆ.
ಇದನ್ನೂ ಓದಿ:ರಾಹುಲ್ ಗಾಂಧಿಗೆ ಬಡತನ ಗೊತ್ತಿದೆಯೆ? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ
ಮೈಸೂರಿನಿಂದ ಹೆಲಿಕಾಪ್ಟರ್​​ನಲ್ಲಿ ಗುಂಡ್ಲುಪೇಟೆಗೆ ಆಗಮಿಸಿದ ಅಮಿತ್ ಶಾ, ಕಾರ್ಯಕರ್ತರ ಬಳಿಗೆ ಆಗಮಿಸಿ ನಂತರ ತೆರೆದ ವಾಹನ ಏರಿ ರೋಡ್ ಶೋ ಆರಂಭಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಸಿ.ಎಸ್.ನಿರಂಜನ್ ಕುಮಾರ್ ಸಾಥ್​ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − eleven =
Remember me
