ಬೆಂಗಳೂರು:ಟಿಕೆಟ್ ಹಂಚಿಕೆ ವಿಚಾರದಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಷಾ ಖಡಕ್ ಸೂಚನೆ ನೀಡಿದ್ದು ಅಭ್ಯರ್ಥಿಗಳ ಆಯ್ಕೆಯಲ್ಲಿ ಹೈಕಮಾಂಡ್ ಅಂತಿಮಗೊಳಿಸಲಿದೆ ಎಂದಿದ್ದಾರೆ.
ಕೋರ್​ ಕಮಿಟಿ ಸಭೆಯಲ್ಲಿ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತನಾಡಿದ ಅಮಿತ್ ಷಾ, ‘ಅಭ್ಯರ್ಥಿಗಳ ಆಯ್ಕೆ ನಮಗೆ ಬಿಡಿ. ಅಭ್ಯರ್ಥಿಗಳ ಅಯ್ಕೆ ಬಗ್ಗೆ ಈಗಾಗಲೇ ನಮ್ಮ ಬಳಿ ಸರ್ವೆ ವರದಿ ಇದೆ. ಸರ್ವೆ ವರದಿ ಆಧಾರದ ಮೇಲೆ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಗುವುದು. ಅದು ಶಾಸಕರಿರಲಿ ಅಥವಾ ಮುಖಂಡರಿರಲಿ’ ಎಂದು ಅಮಿತ್ ಷಾ ಹೇಳಿದ್ದಾರೆ. ಈ ಮೂಲಕ ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಬಹುದು ಎನ್ನುವ ಸುಳಿವನ್ನು ಅಮಿತ್ ಷಾ ನೀಡದ್ದಾರೆ.
‘ಅಭ್ಯರ್ಥಿಗಳ ಆಯ್ಕೆ ಬಗ್ಗೆ ತಲೆ ಕೆಡಿಸಿಕೊಳ್ಳದೇ ಪಕ್ಷ ಬಿಟ್ಟುಹೋಗುವವರನ್ನು ಮನವೊಲಿಸುವಂತೆ ಸೂಚನೆ ನೀಡಿರುವ ಷಾ ಪ್ರಚಾರದ ಕಡೆ ನೀವು ಗಮನ ಹರಿಸಲು ಹೇಳಿದ್ದಾರೆ. ಅದಲ್ಲದೇ ಚುನಾವಣೆ ವೇಳೆ ಯಾವುದೇ ಕಾರಣಕ್ಕೂ ವಿವಾದಕ್ಕೆ ಸಿಲುಕದಂತೆ ಹಾಗೂ ಪಕ್ಷಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 8 =
Remember me
