ಹುಬ್ಬಳ್ಳಿ:ಇಂದು ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಬರಲಿದ್ದು ಚುನಾವಣಾ ಹೊಸ್ತಿಲಲ್ಲಿ ಅಮಿತ್ ಷಾ ರಿಂದ ಧಾರವಾಡ ಗ್ರಾಮಾಂತರ ಜಿಲ್ಲೆಯಲ್ಲಿ ಜನರನ್ನು ಪಕ್ಷದ ಕಡೆಗೆ ಸೆಳೆಯಲು ಬಿಜೆಪಿ ಮುಂದಾಗಿದೆ. ಇಂದು ಮತ್ತು ನಾಳೆ ಅಮಿತ್ ಶಾ ನೇತೃತ್ವದಲ್ಲಿ ಉತ್ತರ ಕರ್ನಾಟಕದಲ್ಲಿ ಚುನಾವಣಾ ರಣತಂತ್ರ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರಂತೆ ಅಮಿತ್ ಷಾ ಕೂಡ ಮತ್ತೊಂದು ಐತಿಹಾಸಿಕ ರೋಡ್ ಶೋ ಮಾಡಲಿದ್ದಾರೆ.
ಇಂದು ರಾತ್ರಿ ಹುಬ್ಬಳ್ಳಿಗೆ ಅಮಿತ್ ಷಾ ಆಗಮಿಸಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ 10.30ಕ್ಕೆ ಕೆಎಲ್ಇ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗಿ 11:45 ಧಾರವಾಡದ ವಿಧಿ ವಿಜ್ಞಾನ ಪ್ರಯೋಗಾಲಯವನ್ನು ಷಾ ಉದ್ಘಾಟಿಸಲಿದ್ದಾರೆ.
ಅಲ್ಲಿಂದ ಮಧ್ಯಾಹ್ನ 1:30ಗಂಟೆಗೆ ಕುಂದಗೋಳದ ಶಂಭುಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ವಿಶೇಷ ಪೂಜೆ ಮಾಡಿಸಲಿದ್ದಾರೆ. ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದ ಭಾಗವಾಗಿ ಗೋಡೆ ಬರಹಕ್ಕೆ ಚಾಲನೆ ಕೂಡ ಇವರು ನೀಡಲಿದ್ದಾರೆ.
ಕುಂದಗೋಳದ ಗಾಳಿ ಮರೆಮ್ಮನ ದೇವಸ್ಥಾನದಿಂದ ಮೂರಂಗಡಿ ಕ್ರಾಸ್ ವರೆಗೂ ಸುಮಾರು ಎರಡು ಕಿ.ಮೀ ತನಕ ಬೃಹತ್ ರೋಡ್ ಶೋ ಮಾಡಲಿದ್ದಾರೆ. ಬಳಿಕ 3:25 ಹೆಲಿಕಾಪ್ಟರ್ ಮೂಲಕ ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿಗೆ ಅಮಿತ್​ ಷಾ ತೆರಳಲಿದ್ದಾರೆ.
ಅಮಿತ್​​ ಷಾ ಹುಬ್ಬಳ್ಳಿಗೆ ಬರಲಿರುವ ಹಿನ್ನೆಲೆಯಲ್ಲಿ ಎಂ.ಕೆ.ಹುಬ್ಬಳ್ಳಿಯಲ್ಲಿ ಪ್ರಮುಖ‌ರ ಸಭೆ ನಡೆದಿದ್ದು ಕರ್ನಾಟಕ ಉಸ್ತುವಾರಿ‌ ಅರುಣ ಸಿಂಗ್ , ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ‌ ಸಿಎಂ ಜಗದೀಶ ಶೆಟ್ಟರ್, ನಳೀನ್ ಕುಮಾರ ಕಟೀಲ್ ಸೇರಿದಂತೆ ಅನೇಕ ಪ್ರಮುಖರು ಈ ಸಭೆಯಲ್ಲಿ ಭಾಗಿಯಾಗಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × four =
Remember me
