ಬೆಂಗಳೂರು:ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಂಗ ಬಂಧನದಲ್ಲಿರುವ ಅಮ್ರಿತ್ ಪೌಲ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಪೀಠ ಈ ಆದೇಶ ಮಾಡಿದೆ. ಅರ್ಜಿದಾರರ ಜಾಮೀನು ಸಿಕ್ಕ ಬಳಿಕ ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಗಳ ನಾಶಕ್ಕೆ ಮುಂದಾಗಬಾರದು. ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಬಾರದು. ಹೊರ ದೇಶಕ್ಕೆ ಪ್ರಯಾಣ ಮಾಡಬಾರದು, ಐದು ಲಕ್ಷ ರೂ.ಗಳ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂದು ನ್ಯಾಯಪೀಠ ಷರತ್ತುಗಳನ್ನು ವಿಧಿಸಿದೆ.
ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರಾಗಿದ್ದ ಪ್ರಸನ್ನ ಕುಮಾರ್, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಉತ್ತರ ಪತ್ರಿಕೆಗಳನ್ನು ತಿದ್ದಲು ಕಾರಣರಾಗಿದ್ದರು. ಅಲ್ಲದೆ, ಹಗರಣದ ನಡೆದ ವೇಳೆ ಅಮ್ರಿತ್ ಪೌಲ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು ಮತ್ತು ಆ ಸಮಯದಲ್ಲಿ ಅವರು ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕುವ ಮೂಲಕ ಹಗರಣ ನಡೆಯಲು ಕಾರಣವಾಗಿದ್ದರು.
೨೦೨೧ರ ಅಕ್ಟೋಬರ್ ೭, ೮ ಮತ್ತು ೧೬ರಂದು ಉತ್ತರ ಪತ್ರಿಕೆಗಳನ್ನು ತಿದ್ದಲಾಗಿದ್ದು, ಈ ವೇಳೆ ಆರೋಪಿಯು ವೈದ್ಯಕೀಯ ರಜೆಯಲ್ಲಿ ಇದ್ದುದಾಗಿ ಹೇಳಿ ಪ್ರಮಾಣ ಪತ್ರ ನೀಡಿದ್ದಾರೆ. ಆದರೆ, ಅವರು ಆ ದಿನಗಳಂದು ತಮ್ಮ ಪ್ರಮಾಣ ಪತ್ರದಲ್ಲಿ ಹೇಳಿರುವ ಯಲಹಂಕ ನ್ಯೂ ಟೌನ್‌ನಲ್ಲಿರುವ ನವಚೇತನ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಪಡೆದೇ ಇಲ್ಲ. ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಅಂತೆಯೇ, ಆ ದಿನಗಳಲ್ಲಿ ಸ್ಟ್ರಾಂಗ್ ರೂಮ್ ಬೀಗಗಳನ್ನು ತಮ್ಮ ವೈಯಕ್ತಿಕ ಕೊಠಡಿಯಲ್ಲಿರಿಸಿದ್ದರು. ಅಲ್ಲಿಂದ ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ವಾದ ಮಂಡಿಸಿದ್ದರು.
ಅರ್ಜಿದಾರರ ಪರ ಹಿರಿಯ ವಕೀಲ ಎಂ.ಎಸ್. ಶ್ಯಾಮಸುಂದರ್, ಪ್ರಕರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿಸಲ್ಲಿಸುತ್ತಿದ್ದು ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ (ಸಿಆರ್‌ಪಿಸಿ) ಕಲಂ ೧೭೩ಕ್ಕೆ ತದ್ವಿರುದ್ಧವಾಗಿದೆ. ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೇಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ ೧೭೩ರ ಅಡಿಯಲ್ಲಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 8 =
Remember me
