ಬೆಂಗಳೂರು:ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯಾ ಲಿಯೋನಾ ತಾನು ತಪ್ಪು ಮಾಡಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾಳೆ.
ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ಅಮೂಲ್ಯ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಳು.
ತಕ್ಷಣವೇ ಉಪ್ಪಾರಪೇಟೆ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆಕೆ ನಾನು ತಪ್ಪು ಮಾಡಿಲ್ಲ ಎಂಬ ಒಂದು ಹೇಳಿಕೆ ಬಿಟ್ಟರೇ, ಪೊಲೀಸರ ಮತ್ತ್ಯಾವುದೇ ಪ್ರಶ್ನೆಗೆ ಉತ್ತರಿಸಿಲ್ಲ. ಅಲ್ಲದೇ, ನನ್ನ ವಕೀಲರ ಬಳಿ ಮಾತನಾಡಿ ಬಳಿಕ ಪ್ರಶ್ನೆಗೆ ಉತ್ತರಿಸುವುದಾಗಿ ಹೇಳಿಕೆ ನೀಡಿದ್ದಾಳೆ ಎಂದು ತಿಳಿದು ಬಂದಿದೆ.
ಅಮೂಲ್ಯಾ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಾದ ನಂತರ ರಾತ್ರೋರಾತ್ರಿ ಕೋರಮಂಗ‌ಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಅಮೂಲ್ಯಾಳನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರಾದ ಶಿರಿನ್ ಜೆ. ಅನ್ಸಾರಿ, ಅವರು ಅಮೂಲ್ಯಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು.
ಪೊಲೀಸರು ಆಕೆಯನ್ನು ಗುರುವಾರ ರಾತ್ರಿ 1.30ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದರು. ಸಾಮಾನ್ಯ ಕೈದಿಯಂತಿದ್ದ ಅಮೂಲ್ಯ ಮೇಲೆ ಸಹ ಕೈದಿಗಳಿಂದ ಹಲ್ಲೆಯಾಗುವ ಭೀತಿ, ಜೈಲಿನಲ್ಲಿ ಗಲಾಟೆಯಾಗುವ ಸಾಧ್ಯತೆಗಳಿರುವುದರಿಂದ ಜೈಲು ಅಧಿಕಾರಿಗಳು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
ಪ್ರತಿಭಟನೆ ಆಯೋಜಕ ಜೆಡಿಎಸ್ ಕಾರ್ಪೋರೇಟರ್ ಇಮ್ರಾನ್ ಪಾಷಾ ಸೇರಿ ಹಲವರಿಗೆ ವಿಚಾರಣೆಗೆ ಹಾಜರಾಗುವಂತೆ ಉಪ್ಪಾರಪೇಟೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಅಮೂಲ್ಯಾ ಲಿಯೋನಾ ಮೇಲೆ ಕೇಸ್ ದಾಖಲಾಗಿದೆ. ತನಿಖೆ ಮುಂದುವರಿದಿದೆ. ಅವಳನ್ನ ಯಾರು ಪ್ರತಿಭಟನೆಗೆ ಅಹ್ವಾನ ಮಾಡಿದ್ದರು. ಆಯೋಜನೆ ಮಾಡಿದವರನ್ನು ತನಿಖೆಗೆ ಒಳಪಡಿಸುತ್ತೇವೆ. ಆಕೆಯ ಹಿಂದೆ ಯಾರಿದ್ದಾರೆ. ಯಾವ ಸಂಸ್ಥೆಗಳು ಇವೆ ಅನ್ನೋದನ್ನ ತನಿಖೆ ಮಾಡ್ತೀವಿ. ಇಂಥವರನ್ನ ಬೆಂಬಲಿಸಬೇಡಿ ಅಂತ ಸದನದಲ್ಲಿ ನಾನು ವಿಪಕ್ಷಗಳನ್ನ ಮನವಿ ಮಾಡಿದ್ದೆ.
| ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
