ಬೆಳಗಾವಿ:ನಗರದಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕ್ಲಬ್ ರಸ್ತೆಯ ನೀರಾವರಿ ಇಲಾಖೆಯ ಕಚೇರಿ ಎದುರು ಶುಕ್ರವಾರ ನಡೆದಿದೆ.
ಕ್ಲಬ್ ರಸ್ತೆಯಲ್ಲಿ ನೀರಾವರಿ ಇಲಾಖೆ, ಕಮರ್ಷಿಯಲ್ ಕಾಂಪ್ಲೆಕ್ಸ್, ಉತ್ತರ ವಲಯ ಐಜಿಪಿ ನಿವಾಸ, ತೋಟಗಾರಿಕೆ ಇಲಾಖೆ, ಜಿಲ್ಲಾಸ್ಪತ್ರೆ, ಜ್ಯೋತಿ ಕಾಲೇಜು ಇದೆ. ಹಿರಿಯ ಅಧಿಕಾರಿಗಳು ಮಾತ್ರವಲ್ಲದೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಸಾಮಾನ್ಯ ಜನರು ಸಂಚರಿಸುತ್ತಾರೆ. ಇಂಥ ಸ್ಥಳದಲ್ಲಿ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನಿಗೆ ಸಾರ್ವಜನಿಕರು ಥಳಿಸಿದ್ದಾರೆ.
ವಾಹನ ದಟ್ಟನೆ ಕಂಡ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಪಟ್ಟರೂ ಕುಡಿದ ಮತ್ತಿನಲ್ಲಿದ್ದ ಕುಡುಕ ಅವರೊಂದಿಗೆ ವಾಗ್ವಾದ ಮಾಡಿದ್ದಾನೆ. ಸ್ಥಳೀಯರ ಸಹಕಾರದಿಂದ ಸಂಚಾರ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದರು.
ನಾನು ಏನು ಹೇಳುತ್ತೇನೋ ಅದನ್ನು ಮಾತ್ರ ಮಾಡುತ್ತೇನೆ… ಶುರುವಾಯ್ತು ಉಪ್ಪಿ ‘UI’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − three =
Remember me
