ಆನೇಕಲ್:ಬನ್ನೇರುಘಟ್ಟ ಕಾಡಂಚಿನ ರಾಗಿಹಳ್ಳಿಯಲ್ಲಿ ಕಾಡಾನೆ ಹಿಂಡಿನಿಂದ ಮಂಗಳವಾರ ತಪ್ಪಿಸಿಕೊಂಡು ಅರಣ್ಯ ಇಲಾಖೆ ಸುಪರ್ದಿಯಲ್ಲಿರುವ 10 ದಿನದ ಆನೆಮರಿಯನ್ನು ತಾಯಿ ಜತೆಗೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಪ್ರಯತ್ನ ಯಶಸ್ಸು ಕಂಡಿಲ್ಲ.
ಶುಕ್ರವಾರ ಬೆಳಗ್ಗೆ 5 ಗಂಟೆಗೆ ಕಾರ್ಯಾಚರಣೆ ಆರಂಭಿಸ ಲಾಯಿತು. ಮರಿ ಸುಸ್ತಾಗಿದ್ದರಿಂದ 10 ಗಂಟೆ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ಪಿಪಿನ್ ಸಿಂಗ್ ತಿಳಿಸಿದ್ದಾರೆ. ಉದ್ಯಾನವನ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಶಾಂತಕುಮಾರ್ ನೇತೃತ್ವದಲ್ಲಿ ಆನೆಮರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರಣ್ಯ ಸಚಿವ ಆನಂದ್ ಸಿಂಗ್ ಕೂಡ ಇದ್ದರು.
ಪರಿಹಾರ:ಆನೇಕಲ್ ತಾಲೂಕಿನ ನಲ್ಲಯ್ಯನದೊಡ್ಡಿಯಲ್ಲಿ ಮಂಗಳವಾರ ಆನೆ ದಾಳಿಗೆ ತುತ್ತಾಗಿ ಮೃತಪಟ್ಟ ರೈತ ಸುರೇಶ್ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ ವಿತರಿಸಲು ಸೂಚಿಸಲಾಗಿದೆ ಎಂದು ಆನಂದ್ ಸಿಂಗ್ ತಿಳಿಸಿದ್ದಾರೆ.
ಏಳೆಂಟು ದಿನದ ಮರಿಯಾಗಿರುವುದರಿಂದ ಮತ್ತೆ ಕಾಡಿಗೆ ಬಿಟ್ಟರೆ ತೊಂದರೆಯಾಗಬಹುದು. ಜೈವಿಕ ಉದ್ಯಾನದಲ್ಲಿ ಆರೈಕೆ ಮಾಡುವುದೇ ಸೂಕ್ತ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
| ಆನಂದ್ ಸಿಂಗ್ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
