ಗದಗ:ತಾಯಿ ಮತ್ತು ಮಗ ಸಾವಿನಲ್ಲೂ ಒಂದಾಗಿರುವ ಘಟನೆ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ನಡೆದಿದೆ. ಮಗ ಶಿವರುದ್ರಯ್ಯ ಅಂದಾನಯ್ಯ ಪೂಜಾರ್ (38) ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಇಂದು ಮೃತಪಟ್ಟಿದ್ದಾನೆ. ಮಗ ಮೃತಪಟ್ಟಿರುವ ಸುದ್ದಿ ತಾಯಿ ಬಸಮ್ಮ ಅವರಿಗೆ ತಿಳಿಯುತ್ತಿದ್ದಂತೆ ಆಘಾತಗೊಂಡಿದ್ದಾರೆ.

ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿ ಬಸಮ್ಮ(68) ಅವರಿಗೆ ಹೃದಯಾಘಾತ ಉಂಟಾಗಿದೆ. ಇದರೊಂದಿಗೆ ತಾಯಿ ಮತ್ತು ಮಗ ಸಾವಿನಲ್ಲೂ ಒಂದಾದ ಘಟನೆ ನಡೆದಿದೆ. ಇವರಿಬ್ಬರ ಸಾವಿನಿಂದ ಇಡೀ ಗ್ರಾಮದ ಜನರು ಶೋಕಸಾಗರದಲ್ಲಿ ಮುಳುಗಿದ್ದಾರೆ. ತಾಯಿ ಮತ್ತು ಮಗನ ಶವಗಳಿಗೆ ಅಂತಿಮ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
