ಬೆಂಗಳೂರು: ಕರೊನಾ ಸೋಂಕು ಹರಡದಂತೆ ತಡೆಯುವ ಸಲುವಾಗಿ ಪಾದರಾಯನಪುರ ವಾರ್ಡ್​ ಅನ್ನು ಸೀಲ್​ಡೌನ್ ಮಾಡಿದ್ದು, ಅಲ್ಲಿ ಅದನ್ನು ಉಲ್ಲಂಘಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇತ್ತು. ಭಾನುವಾರ ರಾತ್ರಿ ಕೆಲವರು ಲಾಕ್​ಡೌನ್ ನಿಯಮ ಉಲ್ಲಂಘಿಸಿ ತಂಡ ತಂಡವಾಗಿ ದಾಂಧಲೆ ನಡೆಸಿದ ವಿಚಾರ ಇಂದು ದೇಶದ ಗಮನಸೆಳೆದಿದೆ. ಇದರ ಬೆನ್ನಿಗೇ ಶಾಸಕ ಜಮೀರ್ ಅಹಮದ್ ಖಾನ್ ಸರಣಿ ಟ್ವೀಟ್ ಮಾಡಿದ್ದು, ಈ ಗಲಭೆ ನನ್ನ ಹೆಸರು ಕೆಡುಸವ ಪ್ರಯತ್ನ ಎಂದು ಹೇಳಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಎಂಬ ಸಂದೇಶವನ್ನು ಮೊದಲು ಟ್ವೀಟ್ ಮಾಡಿದ್ದರು ಜಮೀರ್.ಅದಾಗಿ ಸರಣಿ ಟ್ವೀಟ್​​ಗಳನ್ನು ಮಾಡಿರುವ ಅವರು, ನಾಲ್ಕು ಟ್ವೀಟ್​ಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಆ ಟ್ವೀಟ್​ಗಳಲ್ಲಿರುವ ಸಂದೇಶ ಹೀಗಿದೆ –ಪಾದರಾಯನಪುರದಲ್ಲಿ‌ ಭಾನುವಾರ ರಾತ್ರಿ ಅಹಿತಕರ ಘಟನೆ‌ ನಡೆದ ಕ್ಷಣದಿಂದ ನಾನು ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ರಾತ್ರಿಯೇ ಜನತೆ ಮತ್ತು ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹೇಳಿದ್ದೇನೆ.ಕರೊನಾ ಸೋಂಕು ಹರಡದಂತೆ ರಾತ್ರಿ ಹಗಲು ಶ್ರಮಿಸುತ್ತಿರುವ ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ಜತೆ ಸಹಕರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಏನಾದರೂ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಬೇಕೇ ಹೊರತು ಕಾನೂನು ಉಲ್ಲಂಘನೆ ಮಾಡಿ ದಾಂಧಲೆ ಮಾಡುವುದಲ್ಲ.ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಗಲಾಟೆ ಹಿಂದೆ ನನ್ನ ಹೆಸರು ಕೆಡಿಸುವ ರಾಜಕೀಯ ಪಿತೂರಿ ಇರಬಹುದೆಂಬ ಸಂಶಯ ನನಗಿದೆ. ಈ ಬಗ್ಗೆ ನಾನೂ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅವೆಲ್ಲವನ್ನೂ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ.
#ಜನಮತ#Padarayanapuraಪಾದರಾಯನಪುರ ಗಲಭೆ ನನ್ನ ಹೆಸರು ಕೆಡಿಸುವ ಪ್ರಯತ್ನ ಅಂತ ಶಾಸಕ ಜಮೀರ್ ಅಹಮದ್ ಟ್ವೀಟ್ ಮಾಡಿದ್ದಾರೆ. ಇದನ್ನು ನೀವು ನಂಬ್ತೀರಾ..
— Vijayavani (@VVani4U)April 20, 2020

ಪಾದರಾಯನಪುರ ಗಲಾಟೆಗೆ ಟ್ವಿಸ್ಟ್​; 59 ಜನರನ್ನು ವಶಪಡಿಸಿಕೊಂಡಿರುವ ಪೊಲೀಸರು, ಇಲ್ಲಿನ ಗಲಭೆಯಲ್ಲಿ ಯುವತಿಯದ್ದೇ ಮುಖ್ಯ ಪಾತ್ರ..!

ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ನಡೆದ ಗಲಾಟೆ ಹಿಂದೆ ನನ್ನ ಹೆಸರು ಕೆಡಿಸುವ ರಾಜಕೀಯ ಪಿತೂರಿ ಇರಬಹುದೆಂಬ ಸಂಶಯ ನನಗಿದೆ. ಈ ಬಗ್ಗೆ ನಾನೂ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಅವೆಲ್ಲವನ್ನೂ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ. 4/4#COVID19
— B Z Zameer Ahmed Khan (@BZZameerAhmedK)April 20, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 7 =
Remember me
