ಬಳ್ಳಾರಿ:ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್ ಅವರು ಇಂದು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದು, ಅದೀಗ ಭರ್ಜರಿ ಚರ್ಚೆಗೆ ಕಾರಣವಾಗಿದೆ.
ಬಳ್ಳಾರಿಯ ಹೊಸಪೇಟೆ ತಾಲೂಕಿನ ಕಮಾಲಾಪುರದ ಅಟಲ್ ಬಿಹಾರಿ ವಾಜಪೇಯಿ ಪ್ರಾಣಿಸಂಗ್ರಹಾಲಯದಲ್ಲಿ 66ನೇ ವನ್ಯ ಜೀವಿ ಸಂರಕ್ಷಣಾ ಸಪ್ತಾಹದ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಆನಂದ್ ಸಿಂಗ್​, ಈ ಸರ್ಕಾರ ಯಾವಾಗ ಇರತ್ತೋ…ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಕೂಡಲೇ ಎಚ್ಚೆತ್ತುಕೊಂಡು, ನನ್ನ ಹೇಳಿಕೆಯನ್ನು ಅನ್ಯಥಾ ಭಾವಿಸಬೇಡಿ ಎಂದಿದ್ದಾರೆ.ಇದನ್ನೂ ಓದಿ:ಅನ್​​ಲಾಕ್​ ಇದೆ ಎಂದ ಮಾತ್ರಕ್ಕೆ ಅಸಡ್ಡೆ ಬೇಡ; ಆರೋಗ್ಯ ಸಚಿವರು ನೀಡಿದ್ದಾರೊಂದು ಎಚ್ಚರಿಕೆ
ಆದರೆ ಆನಂದ್​ ಸಿಂಗ್​ ಹೀಗೆ ಹೇಳಲು ಕಾರಣ ಏನಿರಬಹುದು ಎಂಬ ಪ್ರಶ್ನೆ ಎದ್ದಿದೆ. ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆಯಾ? ಅಥವಾ ಆನಂದ್ ಸಿಂಗ್​ ಏನಾದರೂ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರಾ ಎಂಬಿತ್ಯಾದಿ ಮಾತುಗಳೂ ಕೇಳಿಬರುತ್ತಿವೆ.
ಹಿಂದಿನ ಸಮ್ಮಿಶ್ರ ಸರ್ಕಾರ ಉರುಳಲು ಸಚಿವ ಆನಂದ್ ಸಿಂಗ್​ ಕೂಡ ಕಾರಣರಾಗಿದ್ದರು. ವಿಜಯನಗರ ಜಿಲ್ಲೆ ಮತ್ತು ಜಿಂದಾಲ್ ಭೂಮಿ ಪರಭಾರೆ ನೆಪವೊಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದು ಭಾರತದ 1328ನೇ ಚಿಟ್ಟೆ ಪ್ರಭೇದ, ಸಿಕ್ಕಿದ್ದೆಲ್ಲಿ ಗೊತ್ತೇ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + eighteen =
Remember me
