ಆನೇಕಲ್​:ಕೆಲಸ ಮುಗಿಸಿಕೊಂಡು ಮನೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರ ಮೇಲೆ ಕ್ಯಾಂಟರ್​ ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬೆಂಗಳೂರು ಹೊರವಲಯದ ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ಮೃತರು ಅಸ್ಸಾಂ ಮೂಲದವರು. ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗದ ಬಿಡಿ ಭಾಗಗಳು ಬಿದ್ದಿರುವುದನ್ನು ನೋಡಿ ಸ್ಥಳೀಯರು ಕೂಡಲೇ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಅತ್ತಿಬೆಲೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ವಾಹನದ ಸಮೇತ ಪರಾರಿಯಾಗಿರುವ ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ‌.
ಅಸ್ಸಾಂ ಮೂಲದ ಕಾರ್ಮಿಕರ ಸಂಬಂಧಿಕರು ಸಿಕ್ಕಬಳಿಕ ಅವರ ಹೆಸರು ಹಾಗೂ ಎಲ್ಲಿ ವಾಸ ಇದ್ದರೂ ಎನ್ನುವ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಾಗಿದೆ. ಇನ್ನು ಡಿಕ್ಕಿಯ ರಭಸಕ್ಕೆ ರಸ್ತೆಬದಿ ಮೂವರ ದೇಹ ತೀವ್ರವಾದ ಗಾಯಗಳಾಗಿ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕೂಲಿಗಾಗಿ ಹುಟ್ಟೂರು ಬಿಟ್ಟು ಬಂದಿದ್ದ ಕಾರ್ಮಿಕರು ದುರಂತ ಅಂತ್ಯ ಕಂಡ ಸುದ್ದಿ ಕೇಳಿ ಸ್ಥಳೀಯರೂ ಮರುಗಿದ್ದಾರೆ. ವಿಧಿಯನ್ನೊಮ್ಮೆ ಮನದಲ್ಲೇ ಶಪಿಸಿತ್ತಾ, ಈ ಸಾವು ನ್ಯಾಯವೇ? ಎಂದು ಪ್ರಶ್ನಿಸಿದ್ದಾರೆ.
ಬಿಸಿಯೂಟ ವಿತರಣೆಗೆ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ

ರೋಪ್​ ವೇ ಮೂಲಕ ಮದ್ವೆ ಮಂಟಪಕ್ಕೆ ಎಂಟ್ರಿಕೊಟ್ಟ ವಧು! ಶೋಕವಾಗದಿರಲಿ ಆಡಂಬರ… ಎಂದ ನೆಟ್ಟಿಗರು, ಸಖತ್​ ವೈರಲ್​ ಆಗ್ತಿದೆ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seven =
Remember me
