ಬೆಂಗಳೂರು:ಸರ್ಕಾರಿ ಸಾರಿಗೆ ನೌಕರರ ಮುಷ್ಕರದ ನಡುವೆಯೇ ನಗರದ ಮೆಜಿಸ್ಟಿಕ್​ ಬಸ್​ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಜಿಗಣಿಯಿಂದ ಬೆಂಗಳೂರಿಗೆ ಬಂದಿದ್ದ ಚನ್ನಪ್ಪ (77) ಎಂಬುವವರು ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಹೃದಯಘಾತದಿಂದ ಸಾವಿಗೀಡಾಗಿದ್ದಾರೆ.‌ ಚನ್ನಪ್ಪ ಅವರು ಆನೇಕಲ್​ನ ಚಿಕ್ಕನಹಳ್ಳಿ ನಿವಾಸಿ.
ಇದನ್ನೂ ಓದಿರಿ:ಮನೆಯ ಫ್ರಿಡ್ಜ್​ನಲ್ಲಿತ್ತು ಮೃತದೇಹ: ನಿಗೂಢ ಕೇಸ್​ ಬೆನ್ನತ್ತಿ ಹೋದ ಪೊಲೀಸರಿಗೆ ಮಹಿಳೆಯ ಕರಾಳ ಮುಖ ಬಯಲು!
6ನೇ ವೇತನ ಆಯೋಗ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಸಾರಿಗೆ ನೌಕರರು ಸಂಚಾರವನ್ನು ಬಂದ್​ ಮಾಡಿ ಧರಣಿ ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ತೀವ್ರ ತೊಂದೆಯಾಗಿದೆ. ಮುಷ್ಕರದ ಅರಿವಿಲ್ಲದೆ ಬಸ್​ ನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಇನ್ನೊಂದೆಡೆ ಖಾಸಗಿ ಬಸ್​ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಬಸ್​ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಕೀಳುತ್ತಿರುವ ಆರೋಪಗಳು ಸಹ ಕೇಳಿಬರುತ್ತಿವೆ.
ಬೆಳ್ಳಂಬೆಳಗ್ಗೆ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ: ಸರ್ಕಾರಿ ನಿಲ್ದಾಣದಲ್ಲಿ ಖಾಸಗಿ ದರ್ಬಾರ್​, ದುಪ್ಪಟ್ಟು ದರ

Web Exclusive | ಇಂಜಿನಿಯರಿಂಗ್ ವ್ಯಾಸಂಗಕ್ಕೆ ನಿರಾಸಕ್ತಿ, ಖಾಸಗಿ ಸಂಸ್ಥೆಗಳಲ್ಲಿ ಮುಚ್ಚುವ ಸ್ಥಿತಿ!

ಶಾಸಕರ ಪುತ್ರನ ಮೇಲೆಯೇ ಹಲ್ಲೆ; ಕಾರನ್ನು ಹಿಂಬಾಲಿಸಿಕೊಂಡು ಬಂದು ಕಪಾಳಕ್ಕೆ ಹೊಡೆದರು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 12 =
Remember me
