ಆನೇಕಲ್:ರಾಜ್ಯದಲ್ಲಿ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅಭ್ಯರ್ಥಿಗಳೆಲ್ಲಾ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ದೊಡ್ಡ ಮಟ್ಟದಲ್ಲೇ ರ್‍ಯಾಲಿ ನಡೆಸಿ, ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಮೂಲಕ ಪರೋಕ್ಷವಾಗಿ ಎದುರಾಳಿ ಅಭ್ಯರ್ಥಿಗೆ ತಮ್ಮಗಿರುವ ಬೆಂಬಲ ಪ್ರದರ್ಶಿಸುತ್ತಿದ್ದಾರೆ.
ಇದೀಗ ಆನೇಕಲ್ ಕ್ಷೇತ್ರದ ಬಿಎಸ್​ಪಿ ಅಭ್ಯರ್ಥಿ ಡಾ.ವೈ.ಚಿನ್ನಪ್ಪ ಅವರು ವಿಭಿನ್ನವಾಗಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಹುತೇಕ ಅಭ್ಯರ್ಥಿಗಳು ತೆರೆದ ವಾಹನ, ನಡಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಸುತ್ತಿದ್ದರೆ, ಡಾ.ವೈ.ಚಿನ್ನಪ್ಪ ಅವರು ಆನೆ ಮೇಲೆ ಕುಳಿತು ಬಂದು ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ:ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ; ದೇವೆಗೌಡರಿಂದ ಬಿ ಫಾರ್ಮ್ ಪಡೆಯುತ್ತಲೇ ಕಣ್ಣೀರು!
ಬಿಎಸ್​​ಪಿ ಅಭ್ಯರ್ಥಿ ಡಾ.ವೈ.ಚಿನ್ನಪ್ಪ ಅವರು ಆನೇಕಲ್ ಕ್ಷೇತ್ರದಲ್ಲಿ ಹಲವು ದಿನಗಳಿಂದ ಮತದಾರರನ್ನು ತನ್ನತ್ತ ಸೆಳೆಯಲೆಂದು ವಿಭಿನ್ನವಾದ ಕಾರ್ಯಕ್ರಮಗಳನ್ನು ಆಯೋಜಿಸಿ ಗಮನ ಸೆಳೆದಿದ್ದರು. ಇದೀಗ ಕಾರ್ಯಕರ್ತರು, ಜಾನಪದ ಕಲಾತಂಡಗಳೊಂದಿಗೆ ಆನೆ ಮೇಲೆ ಕುಳಿತು ಬಂದು ಸುದ್ದಿಯಾಗಿದ್ದಾರೆ.
ವಾಸ್ತವವಾಗಿ ಬಿಎಸ್​ಪಿ ಅಭ್ಯರ್ಥಿ ಡಾ.ವೈ ಚಿನ್ನಪ್ಪ ಅವರು ಕುಳಿತು ಬಂದಿರುವುದು ನಿಜವಾದ ಆನೆಯ ಮೇಲಲ್ಲ. ಬದಲಾಗಿ ಕೃತಕ ಆನೆಯ ಮೇಲೆ ಕುಳಿತು ನಾಮಪತ್ರ ಸಲ್ಲಿಕೆ ಮಾಡಲು ಬಂದಿದ್ದಾರೆ. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ತಾಲೂಕು ಕಚೇರಿಗೆ ಬಂದಿದ್ದಾರೆ.
ಇದನ್ನೂ ಓದಿ:ಬಂಗಾಳದ ಕಾರ್ಮಿಕನಿಗೆ ಕೇರಳದಲ್ಲಿ ಒಲಿಯಿತು ಅದೃಷ್ಟ; ಲಾಟರಿಯಲ್ಲಿ ಹಣ ಗೆಲ್ಲುತ್ತಿದ್ದಂತೆ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
