ಕಾರಟಗಿ(ಕೊಪ್ಪಳ):ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸಂಗಮ್ಮ ವಸ್ತ್ರದ್, ಮಗುವಿಗೆ ಅಕ್ಷರಾಭ್ಯಾಸ ಮಾಡಿಸುವ ಸಲುವಾಗಿ ಹಿಗ್ಗಾ-ಮುಗ್ಗಾ ಥಳಿಸಿರುವ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ.
ಇತರೆ ಮಕ್ಕಳು ಸಂಗಮ್ಮ ಬಳಿ ವರ್ಣಮಾಲೆ ಬರೆಸಿಕೊಂಡು ಹೋಗಿದ್ದಾರೆ. ಆದರೆ, ಒಂದು ಮಗು ಮಾತ್ರ ಅಕ್ಷರಗಳನ್ನು ಬರೆಸಿಕೊಂಡಿಲ್ಲ. ಇದನ್ನೇ ನೆಪ ಮಾಡಿಕೊಂಡ ಕಾರ್ಯಕರ್ತೆ ಮಗುವಿಗೆ ಬೈದು, ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಕಾರ್ಯಕರ್ತೆಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಸಂಗಮ್ಮ ವಸ್ತ್ರದ್ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರೇಂದ್ರ ನಾವದಗಿ ತಿಳಿಸಿದ್ದಾರೆ.
ಮಗುವಿನ ಮನೆಗೆ ಭೇಟಿ ನೀಡಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿ ಮಗು ಆರೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲಾಗಿದೆ. ಕಾರ್ಯಕರ್ತೆ ಗ್ರಾಮ ತೊರೆದಿದ್ದಾರೆ. ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 6 =
Remember me
