ಉಡುಪಿ:ಉಡುಪಿಯ ಶಿರೂರು ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಚಿ. ಅನಿರುದ್ಧ ಸರಳತ್ತಾಯರು ನಿಯೋಜನೆಗೊಳ್ಳಲಿದ್ದು, ಅವರ ಪಟ್ಟಾಭಿಷೇಕ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳು ಇಂದು ಉಡುಪಿಯ ಶಿರೂರು ಮೂಲ ಮಠದಲ್ಲಿ ನೇರವೇರಿದವು.
ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥರ ಉಪಸ್ಥಿತಿಯಲ್ಲಿ ದೇವತಾ ಪ್ರಾರ್ಥನೆ, ವಟುವಿಗೆ ಫಲ ಪ್ರಧಾನ, ಗಣಪತಿ ಹೋಮ, ಬ್ರಹ್ಮಕೂರ್ಚ ಹೋಮ, ಪವಮಾನ ಮಂಡಲ ಹೋಮ, ಧನ್ವಂತರಿ ಹೋಮ, ನವಗ್ರಹ ಹೋಮ, ತಿಲಹೋಮ, ಪ್ರಾಯಶ್ಚಿತ್ತ ಯಾಗಾದಿ ಕರ್ಮಾಂಗಗಳನ್ನು ನೆರವೇರಿಸಲಾಯಿತು.
ಶಿರೂರು ಮೂಲ ಮಠದಲ್ಲಿ ನಡೆದ ಈ ಎಲ್ಲ ಧಾರ್ಮಿಕ ವಿಧಿ-ವಿಧಾನಗಳನ್ನು ಅವಧಾನಿ ಸುಬ್ರಹ್ಮಣ್ಯ ಭಟ್ಟ ಹಾಗೂ ವಿದ್ವಾನ್ ಗಿರಿರಾಜ ಉಪಾಧ್ಯಾಯರು ಶಾಸ್ತ್ರೋಕ್ತವಾಗಿ ನೆರವೇರಿಸಿದರು. ಮೇ 14ರವರೆಗೆ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಮಗ ಮಾಡಿದ ಆ ಒಂದು ಕೆಲಸ ಅಮ್ಮನನ್ನೂ ಬಲಿ ಪಡೆಯಿತಾ?; ಪತಿ ಸತ್ತ ಕೆಲವೇ ಕ್ಷಣಗಳಲ್ಲಿ ಪತ್ನಿಗೂ ಸಾವು!

ಇದು ದುರ್ಬಳಕೆಯೋ ಸದ್ಬಳಕೆಯೋ?!: ಬಸ್​ ನಿಲ್ದಾಣದಲ್ಲಿ ಈ ರೈತ ಮಾಡಿದ ಕೆಲಸ ಎಂಥದ್ದು ನೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fourteen =
Remember me
