ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಅವರ ಪತ್ನಿ ಮಹತ್ವದ ಅಪ್​ಡೇಟ್​ವೊಂದನ್ನು ನೀಡಿದ್ದಾರೆ. ಈ ಮೂಲಕ ಅವರು ಸ್ಪಷ್ಟನೆ ನೀಡುವ ಜತೆಗೆ ಮನವಿಯನ್ನೂ ಮಾಡಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರನ್ನು ಇಂದು ಬೆಳಗಿನ ಜಾವ 3.40ರ ಸುಮಾರಿಗೆ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ.ಸತೀಶ್‌ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ಅವರಿಗೆ ಚಿಕಿತ್ಸೆ ನೀಡುತ್ತಿದೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಕುಮಾರಸ್ವಾಮಿ ಅವರಿಗೆ ಲಘುವಾದ ಸ್ಟ್ರೋಕ್ ಆಗಿದ್ದು, ಮಿದುಳಿನ ಎಡಭಾಗದಲ್ಲಿ ತೊಂದರೆ ಉಂಟಾಗಿ ಶರೀರದ ಬಲಭಾಗಕ್ಕೆ ಸಮಸ್ಯೆ ಆಗಿತ್ತು. ಈಗ ಎಲ್ಲ ಸರಿಯಾಗಿದೆ. ಚಿಕಿತ್ಸೆ ಮುಂದುವರಿದಿದ್ದು, ಚೆನ್ನಾಗಿ ಮಾತು ಕೂಡ ಆಡುತ್ತಿದ್ದಾರೆ. ಹೃದಯ ಬಡಿತ, ರಕ್ತದೊತ್ತಡ ಎಲ್ಲವೂ ಉತ್ತಮವಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಡಾ.ಸತೀಶ್​ಚಂದ್ರ ಸಂಜೆ ಮಾಧ್ಯಮದವರಿಗೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಕೋಚಿಂಗ್​ಗೆ ತೆರಳುವ ಮಕ್ಕಳೊಂದಿಗೆ ಮನೆ ಬಿಡುತ್ತಿರುವ ತಂದೆ-ತಾಯಿ, ಅಜ್ಜ-ಅಜ್ಜಿ; ಕಾರಣ ಭಯಾನಕ!
ಈ ಎಲ್ಲದರ ನಡುವೆ ಮಾಜಿ ಸಿಎಂ ಎಚ್​​ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿಯವರು ಆರಾಮಾಗಿದ್ದಾರೆ, ಊಹಾಪೋಹದ ಸುದ್ದಿಗಳನ್ನು ಹರಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದ ಜನತೆ ಗಾಬರಿ ಆಗುವುದು ಬೇಡ, ಯಾರೂ ಆತಂಕ ಪಡಬೇಡಿ, ನಾಳೆಯೇ ಡಿಸ್​ಚಾರ್ಜ್​ ಮಾಡುವುದಾಗಿ ಆಸ್ಪತ್ರೆಯವರು ಹೇಳಿದ್ದರು, ನಾನೇ ಬೇಡ ಎಂದಿರುವುದಾಗಿಯೂ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.
ಪೊಲೀಸ್ ‘ಪೋಸ್ಟ್​’ಗಳಲ್ಲೂ ಕ್ರಿಯೇಟಿವಿಟಿ; ಇಂಪ್ರೆಸ್​ ಆಗುವಂತೆ ‘ಎಕ್ಸ್​’ಪ್ರೆಸ್ ಮಾಡುತ್ತಿರುವ ಪೊಲೀಸರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
