ಹುಬ್ಬಳ್ಳಿ:ಮೇ 15ರಂದು ಇಲ್ಲಿನ ವೀರಾಪುರ ಓಣಿಯಲ್ಲಿ ನಡೆದಿದ್ದ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ನನ್ನು ಬಂಧಿಸಿದ್ದಾರೆ.
ಮೇ 15ರ ಮುಂಜಾನೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ. ಸದ್ಯ ಶೋಧ ನಡೆಸಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ದಾವಣಗೆರೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಆತನ ಕೃತ್ಯಗಳು ಬಯಲಾಗುತ್ತಿವೆ. ಈತನ ವೃತ್ತಿಯೇ ಕಳ್ಳತನ, ಪವೃತ್ತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಇಷ್ಟೇ ಅಲ್ಲದೇ ಮದ್ಯ ವ್ಯಸನಕ್ಕೆ ಬಲಿಯಾಗಿದ್ದ ಎಂದು ತಿಳಿದು ಬಂದಿದೆ. ಈತ ಹಲವಾರು ಕಳ್ಳತನ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದ ಎಂದು ತಿಳಿದು ಬಂದಿದೆ.
ಈ ಕುರಿತು ಮಾತನಾಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತರಾದ ರೇಣುಕಾ ಸುಕುಮಾರ್​, ಹಂತಕನ‌ ಪತ್ತೆಗೆ ಎರಡು ಪೊಲೀಸ್ ಟೀಮ್ ರಚನೆ ಮಾಡಿದ್ದು,‌ ಒಂದು ತಂಡ ಮೈಸೂರು ಹಾಗೂ ಮತ್ತೊಂದು ತಂಡ ದಾವಣಗೆರೆಯಲ್ಲಿ ಹುಡುಕಾಟ ನಡೆಸಲಾಗಿತ್ತು. ಹತ್ಯೆ ಸ್ಥಳದ ಅಕ್ಕಪಕ್ಕದಲ್ಲಿನ ಮತ್ತು ಬಸ್ ನಿಲ್ದಾಣದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ವಿಶ್ವನ ಬಂಧನಕ್ಕೆ ಬಲೆ ಬೀಸಲಾಗಿತ್ತು.
ಇದನ್ನೂ ಓದಿ:ಮಳೆಯಿಂದಾಗಿ ಎಸ್​ಆರ್​ಎಚ್​-ಗುಜರಾತ್​ ಪಂದ್ಯ ರದ್ದು; ಪ್ಲೇಆಫ್​ ರೇಸ್​​ನಿಂದ ಹೊರಬಿದ್ದ ಡೆಲ್ಲಿ-ಲಖನೌ
ಮೇ 16ರ ರಾತ್ರಿ ಆರೋಪಿಯನ್ನು ದಾವಣೆಗೆರೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಳಿ ಯಾವುದೇ ಮೊಬೈಲ್ ಇರಲಿಲ್ಲ, ಕಳೆದ ಹದಿನೈದು ದಿನಗಳಿಂದ ವಿಶ್ವ ಅಲಿಯಾಸ್ ಗಿರೀಶ್ ಮೊಬೈಲ್ ‌ಬಳಕೆ‌ ಮಾಡಿಲ್ಲ. ಆರೋಪಿ ವಿಶ್ವ ಸ್ನೇಹಿತರ ಜೊತೆಗೆ ಬೈಕ್ ಕಳ್ಳತನ ಮಾಡುತ್ತಿದ್ದ. ಅಲ್ಲದೇ ಅಮಾಯಕ ಯುವತಿಯರನ್ನು ಟಾರ್ಗೆಟ್ ಮಾಡಿ, ಅವರ ಜೊತೆ ಪ್ರೀತಿ ನಾಟಕವಾಡಿ, ಬಳಿಕ ಅವರನ್ನು ಬಳಸಿಕೊಂಡು, ಯುವತಿರಿಂದ ಬಂಗಾರ, ಬೆಳ್ಳಿ, ಹಣ ಪಡೆದುಕೊಂಡು ಮೋಸ ಮಾಡಿರುವ ಪ್ರಕರಣಗಳು ಸಹ ಹೊರಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಅಂಜಲಿ ಪ್ರಕರಣದಲ್ಲೂ ವಿಶ್ವ ಆಕೆಗೆ ಮೋಸ ಮಾಡಲು ಮುಂದಾಗಿದ್ದ ಎಂದು ತಿಳಿದು ಬಂದಿದೆ. ಇದಕ್ಕೆ ಅಂಜಲಿ ಒಪ್ಪದಿದ್ದಾಗ, ಹತ್ಯೆ ಮಾಡಿ ಪೈಶಾಚಿಕತೆ ಮರೆದಿದ್ದಾನೆ. ಇನ್ನೂ ವಿಶ್ವನ ಅಪರಾಧ ಹಿನ್ನೆಲೆ ಬಗ್ಗೆ ಬೆಂಡಿಗೇರಿ ಪೋಲಿಸರಿಗೆ ಮೊದಲೇ ಗೊತ್ತಿತ್ತು. ಹೀಗಿದ್ದರೂ ಅಂಜಲಿ ಪ್ರಕರಣದಲ್ಲಿ ಯಾಕೆ ನಿರ್ಲಕ್ಷ್ಯ ತೋರಿದ್ದಾರೆ ಎನ್ನುವುದು ಈಗ ಹಲವಾರು ಅನುಮಾನಕ್ಕೆ ಆಸ್ಪದ ಮಾಡಿಕೊಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 11 =
Remember me
