ಕಾರವಾರ:ಅಂಕೋಲಾ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಈ ಘಟನೆಯಲ್ಲಿ 7 ಮಂದಿ ಮಣ್ಣಿನಡಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.
ಶಿರೂರಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಡಾಬಾದಲ್ಲಿದ್ದ ಲಕ್ಷ್ಮಣ ನಾಯ್ಕ(47 )ಶಾಂತಿ ನಾಯ್ಕ(36) ರೋಶನ್ ನಾಯ್ಕ(11),ಅವಂತಿಕಾ (6)ಜಗನ್ನಾಥ (55)ಮಣ್ಣಿನಡಿ ಸಿಲುಕಿದ್ದಾರೆ. ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ.  ಟ್ಯಾಂಕರ್ ಹಾಗೂ ಅದರಲ್ಲಿದ್ದ ಕ್ಲೀನರ್ ಕೂಡ ಸಿಲುಕಿದ್ದು ಅವರ ಹೆಸರು ತಿಳಿದು ಬರಬೇಕಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ‌ ವಾಹನ ಸಂಚಾರ ಸ್ಥಗಿತಗೊಂಡಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಟಿ ಕುಡಿಯುತ್ತಿದ್ದರು. ಇದೇ ವೇಳೆ ಭಾರಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದ್ದು, ಚಾಲಕ ಹಾಗೂ ಕ್ಲೀನರ್ ಮಣ್ಣಿನಡಿ ಸಿಲುಕಿದ್ದಾರೆ. ಮಣ್ಣಿನಡಿ ಸಿಲುಕಿದವರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಜಿಲ್ಲಾಡಳಿತವು ಹೆದ್ದಾರಿ‌ ಮೇಲಿನನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × three =
Remember me
