ಬೆಂಗಳೂರು:ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುವ ಕುರಿತು ಇಂದು ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ. ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದು ಅಕ್ಕಿಯನ್ನು ಬೆಳೆಯುವ ರಾಜ್ಯಗಳ ಜತೆಗೆ ಮಾತನಾಡಿದ್ದಾರೆ ಎಂದು ಸಿಎಂ ಹೇಳಿದ್ದಾರೆ.​
ಅಲ್ಲದೇ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ, ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರವು ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು ಹಾಗೂ ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ ಮತ್ತು ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ. ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆಟ್ರಿಕ್​ ಟನ್​ ಅಗತ್ಯವಿದೆ ಎಂದು ಕೋರಿ ಜೂನ್‌ 9ರಂದು ಪತ್ರ ಬರೆದಿತ್ತು.
ಇದನ್ನೂ ಓದಿ:3 ದಿನದಲ್ಲಿ 98 ಲಕ್ಷ ಮಹಿಳೆಯರಿಂದ ಉಚಿತ ಪ್ರಯಾಣ; ಸರ್ಕಾರಕ್ಕಾದ ಖರ್ಚು 21 ಕೋಟಿ ರೂ.
ಇದಕ್ಕೆ ಜೂನ್‌ 12ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ.ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ವಾಪಸ್ಸು ಪತ್ರ ಬರೆದಿತ್ತು. ಇದಾದ ನಂತರ ಜೂನ್ 13ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆಟ್ರಿಕ್​ ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ, ಮಾರಾಟ ಯೋಜನೆಯಡಿ (ಒಎಂಎಸ್​​​ಎಸ್​ಡಿ) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಿ ಕೇಂದ್ರವು ರಾಜಕೀಯವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.
ಎಫ್​ಸಿಐ ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1ರಿಂದ ತಲಾ 10ಕೆ.ಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆಂದು ಘೋಷಿಸಿದ್ದೆವು. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದಂತೆ ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರ ಜತೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಆಹಾರ ಸಚಿವರು ಈ ವಿಚಾರವಾಗಿ ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದು, ಛತ್ತೀಸ್‌ಗಢದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಲಭಿಸಲಿದೆ ಎಂದು ಸಿಎಂ ಹೇಳಿದ್ದಾರೆ.
ಇದನ್ನೂ ಓದಿ:ಮಣಿಪುರ ಹಿಂಸಾಚಾರ: ಈಶಾನ್ಯ ರಾಜ್ಯದ ಏಕೈಕ ಮಹಿಳಾ ಸಚಿವೆಯ ನಿವಾಸಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ, ನಾವು ಹಣ ನೀಡಿ ಪಡೆಯುತ್ತೇವೆ. ಇತರರಿಗೆ ಕೊಡುವ ರೀತಿಯಲ್ಲಿ ಎಫ್​ಸಿಐ ನಮಗೂ ಕೊಡುತ್ತಿತ್ತು. ಆದರೆ ಈಗ ಕರ್ನಾಟಕ ರಾಜ್ಯಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನ: ಮನವಿ ಮಾಡುವುದು ಇದ್ದೇ ಇದೆ. ಆದರೆ ಈ ರೀತಿ ಮಾಡಿರುವುದು ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಸಿಎಂ ಟ್ವೀಟ್​ ಮಾಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 12 =
Remember me
