ಬೆಂಗಳೂರು:ಐದು ಗ್ಯಾರಂಟಿಗಳ ಮೂಲಕ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​​ಗೆ ಗ್ಯಾರಂಟಿಗಳ ಪೈಕಿ ಒಂದಾಗಿರುವ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜತೆ ಸಂಘರ್ಷ ಉಂಟಾಗಿದೆ. ಈ ಸಂಘರ್ಷ ಇನ್ನೂ ಬಗೆಹರಿಯದ ಕಾರಣ ಅನ್ನಭಾಗ್ಯಕ್ಕೂ ಸಂಕಷ್ಟ ಎದುರಾಗಿದೆ.
ಕೇಂದ್ರ ಸರ್ಕಾರ ಅಕ್ಕಿ ನೀಡಲು ತಕರಾರು ತೆಗೆದಿದ್ದರಿಂದ ಹಾಗೂ ಅನ್ನಭಾಗ್ಯ ಯೋಜನೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್​ಗೆ ಅನನುಕೂಲವಾದ್ದರಿಂದ ಅದು ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವುದಾಗಿ ಹೇಳಿತ್ತು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಇನ್ನೂ ಎರಡು ತಿಂಗಳು ಹೆಚ್ಚುವರಿ ಅಕ್ಕಿ ಸಿಗುವುದು ಕಷ್ಟ ಎಂಬಂತಾಗಿದೆ.
ಈ ಕುರಿತು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಇಂದು ದೇವನಹಳ್ಳಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ತಿಂಗಳು ಹೆಚ್ಚುವರಿ 5 ಕೆ.ಜಿ. ಅಕ್ಕಿ ಸಿಗುವುದಿಲ್ಲ, ಅದರ ಬದಲಿಗೆ ಪಡಿತರದಾರರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದಿದ್ದಾರೆ. ಆಗಸ್ಟ್​ ಮಾತ್ರವಲ್ಲದೆ ಸೆಪ್ಟೆಂಬರ್​ನಲ್ಲೂ ಹೆಚ್ಚುವರಿ ಅಕ್ಕಿ ಸಿಗುವುದರ ಕುರಿತು ಅನುಮಾನ ವ್ಯಕ್ತಪಡಿಸಿರುವ ಅವರು, ಆದಷ್ಟು ಬೇಗ ಅಕ್ಕಿ ಹೊಂದಿಸಿ ಕೊಡುವುದಾಗಿ ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − five =
Remember me
