ಬೆಂಗಳೂರು:ಮೆಟ್ರೋ ಪಿಲ್ಲರ್ ದುರಂತಕ್ಕೆ ತಾಯಿ-ಮಗಳು ಬಲಿಯಾಗಿ ಹತ್ತು ದಿನಗಳು ಕಳೆಯುವಷ್ಟರಲ್ಲೇ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಇನ್ನೊಂದು ಅವಘಡ ಸಂಭವಿಸಿದ್ದು, ಕಾರೊಂದರ ಮೇಲೆಯೇ ಬ್ಯಾರಿಕೇಡ್ ಮಗುಚಿ ಬಿದ್ದಿದೆ. ಪರಿಣಾಮವಾಗಿ ಕಾರು ಜಖಂಗೊಂಡಿದೆ.
ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಹೋಗುವ ರಸ್ತೆಯಲ್ಲಿ ಇಂದು ಈ ಅವಘಡ ಸಂಭವಿಸಿದೆ. ಮೇಟ್ರೋ ಕಾಮಗಾರಿ ಭದ್ರತೆಗಾಗಿ ಅಳವಡಿಸಿದ್ದ ಬ್ಯಾರಿಕೇಡ್ ಹುಂಡೈ ಐ-10 ಕಾರಿನ ಮೇಲೆ ಮಗುಚಿ ಬಿದ್ದಿದೆ. ಬ್ಯಾರಿಕೇಡ್ ಬಿದ್ದ ರಭಸಕ್ಕೆ ಕಾರು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅವಘಡಕ್ಕೆ ಸಂಬಂಧಿಸಿದಂತೆ ಕಾರಿನ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:ಮೆಟ್ರೋ ಪಿಲ್ಲರ್​ ದುರಂತ: ವರ್ಕ್​ ಫ್ರಂ ಹೋಮ್​ ಒಪ್ಪಿಕೊಂಡಿದ್ದರೆ ಉಳಿಯುತ್ತಿತ್ತೇ ಜೀವ?
ಇದೇ ತಿಂಗಳ ಹತ್ತನೇ ತಾರಿಕೀನಿಂದು ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಸಾಫ್ಟ್‌ವೇರ್ ಎಂಜಿನಿಯರ್ ತೇಜಸ್ವಿನಿ (28) ಮತ್ತು ಮಗ ವಿಹಾನ್ (2) ಸಾವಿಗೀಡಾಗಿದ್ದರು. ಮಾತ್ರವಲ್ಲ, ಈಕೆಯ ಪತಿ ಲೋಹಿತ್ ಮತ್ತು ಇನ್ನೊಂದು ಮಗಳಿಗೆ ಗಾಯಗಳಾಗಿದ್ದವು. ಇದಾಗಿ ಹತ್ತು ದಿನಗಳಾಗುವಷ್ಟರಲ್ಲಿ ಈ ಅವಘಡ ಸಂಭವಿಸಿದ್ದು, ಮೆಟ್ರೋ ಕಾಮಗಾರಿ ಪ್ರದೇಶದಲ್ಲಿ ಓಡಾಡುವುದೇ ಅಪಾಯಕಾರಿ ಎಂಬ ಆತಂಕ ಉಂಟಾಗಿದೆ.
ಗಂಡ-ಹೆಂಡಿರ ಜಗಳ ಚೂರಿ ಇರಿಯುವ ತನಕ; ಟೀ ಕೇಳಿದ್ದಕ್ಕೆ ಪತಿಗೆ ಚಾಕು ಚುಚ್ಚಿದ ಪತ್ನಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 1 =
Remember me
